ರಾಯ್ಪುರ : ಕಂದಮ್ಮನ ಮೇಲೆ ಪಾಪಿ ಪೊಲೀಸ್ ಒಬ್ಬ ಸಿಗರೇಟ್ ನಿಂದ ಸುಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಪ್ರಕರಣ ಛತ್ತೀಸ್ ಗಢದ ಬಾಲೋಡ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಅವಿನಾಶ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಸ್ಟೇಬಲ್ ಬಂಧಿಸಿ, ಕೆಲಸದಿಂದ ವಜಾ ಮಾಡಲಾಗಿದೆ. ಸದ್ಯ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 323ರ ಅಡಿ ಪ್ರಕರಣ ದಾಖಲಾಗಿದೆ. 

ಬಾಲಕಿಯ ಮೇಲೆ ಕೃತ್ಯ ಎಸಗಿದ ನಂತರ ಆರೋಪಿ ಪರಾರಿಯಾಗಿದ್ದ. ಆರೋಪಿ ಪೊಲೀಸ್ ಕಾನ್ಸ್ ಸ್ಟೇಬಲ್ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಬಲೋಡ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಸಿಂಗ್ ಮೀನಾ ತಿಳಿಸಿದ್ದಾರೆ.

ಆರೋಪಿ ಕಳೆದ 20 ದಿನಗಳ ಹಿಂದೆಯಷ್ಟೇ ವರ್ಗಾವಣೆಗೊಂಡಿದ್ದ. ಈ ವ್ಯಕ್ತಿ ಸಂತ್ರಸ್ಥೆಯ ಮನೆಯಲ್ಲಿ ಬಾಡಿಗೆಗೆ ಇದ್ದ. ಬಾಲಕಿಯ ತಾಯಿ ಜಾನಪದ ಗಾಯಕಿ ಲಕ್ಷ್ಮಿ ನಂದ್ರೆ, ಈ ವ್ಯಕ್ತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಹಣ ಪಡೆದಿದ್ದರು. 

ಇತ್ತೀಚೆಗೆ ಸಂತ್ರಸ್ಥೆಯ ಮನೆಗೆ ಆರೋಪಿ ಕುಡಿದು ಬಂದಿದ್ದ. ಈ ಸಂದರ್ಭದಲ್ಲಿ ಮಗುವಿಗೆ ಅಪ್ಪ ಎಂದು ಕರೆಯುವಂತೆ ಹೇಳಿದ್ದಾನೆ. ಇದಕ್ಕೆ ಮಗು ನಿರಾಕರಿಸಿದೆ. ಇದರಿಂದ ಕೋಪಗೊಂಡ ಪಾಪಿ, ಮುಖ, ಹೊಟ್ಟೆ, ಬೆನ್ನು ಹಾಗೂ ಕೈಗಳಿಗೆ ಸಿಗರೇಟ್ ನಿಂದ ಸುಟ್ಟು ಗಾಯ ಮಾಡಿದ್ದಾನೆ.

ಈ ವಿಚಾರ ಗಮನಕ್ಕೆ ಬಂದ ಕೂಡಲೇ ಮಹಿಳೆ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೇ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. 

Leave a Reply

Your email address will not be published. Required fields are marked *

You May Also Like

ಕೊರೊನಾ ಸಂಕಷ್ಟ ಪರಿಹಾರಕ್ಕೆ ಸಿರಿವಂತರ ಮೇಲೆ ತೆರಿಗೆ ವಿಧಿಸಿ

ಬೆಂಗಳೂರು: ಸಾಹಿತಿ, ಕಲಾವಿದರು, ಜನಪರ ಹೋರಾಟಗಾರರು ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಸಿರಿವಂತರ ಮೇಲೆ ಹೆಚ್ಚಿನ ತೆರಿಗೆ…

ರಾಜಸ್ತಾನ್ ರಾಜಕೀಯ: ಕ್ಲೈಮಾಕ್ಸ್ ಗೆ ಕ್ಷಣಗಣನೆ:ಡಿಸಿಎಂ, ರಾಜ್ಯಾಧ್ಯಕ್ಷ ಹುದ್ದೆಯಿಂದ ಪೈಲಟ್ ಡ್ರಾಪ್

ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ…

ದಕ್ಷಿಣ ಆಫ್ರಿಕಾ ಕ್ರಿಕೇಟ್ ಆಟಗಾರನಿಗೆ ಕೊರೋನಾ ಪಾಸಿಟಿವ್..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಬಂದ ಮೂರನೇ ಕ್ರಿಕೆಟ್ ಆಟಗಾರ ಸೋಲೋ ಆಗಿದ್ದಾರೆ.

ದೇಶದ ಜನರಿಗೆ ಉಚಿತ ಲಸಿಕೆ, ಆಹಾರಧಾನ್ಯ ವಿತರಣೆ : ನರೇಂದ್ರ ಮೋದಿ ಘೋಷಣೆ

ಜೂನ್ 21ರಿಂದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ. 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಲಸಿಕೆ ವಿತರಣೆ ಮಾಡಲಿದೆ