ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಲಕ್ಷ್ಮೇಶ್ವರ ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ರಕ್ಷಣಾ ವೇದಿಕೆ ನಗರ ಘಟಕದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.

ಧ್ವಜಾರೋಹಣ ನೆರವೇರಿಸಿ ಶಿಕ್ಷಕ ಜಿ.ಎಸ್.ಗುಡಗೇರಿ ಹಾಗೂ ಈಶ್ವರ್ ಮೆಡ್ಲೇರಿ ಶಿಕ್ಷಕರು ನಾಡಿ ಏಕೀಕರಣದ ಬಗ್ಗೆ ಹಾಗೂ ಕರ್ನಾಟಕ ರಾಜ್ಯ ಉದಯವಾಗಿ 55 ವರ್ಷ ವರ್ಷಗಳ ತುಂಬಿ 56 ನೇ ವಸಂತಕ್ಕೆ ಪಾದರ್ಪಣೆ ಮಾಡುತ್ತಿದ್ದು ನಮಗೆಲ್ಲರಿಗೂ ಸಂತೋಷದ ವಿಷಯ ಹಾಗೂ ಕರ್ನಾಟಕದ ಭಾಷೆ-ಗಡಿ ನಾಡು ನುಡಿ ವಿಚಾರಗಳಿಗೆ ಧಕ್ಕೆ ಬಂದಾಗ ನಾವೆಲ್ಲರೂ ಒಗ್ಗಟ್ಟಾಗಿರುವ ಅವಶ್ಯಕತೆಯಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಗರ ಘಟಕ ಹಾಗೂ ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಎಲ್ಲಾ ಕರವೇ ಕಾರ್ಯಕರ್ತರು ಹಳೆ ಬಸ್ ನಿಲ್ದಾಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಧ್ವಜಾರೋಹಣ ನೆರವೇರಿಸಿದರು. ಲಕ್ಷ್ಮೇಶ್ವರ ವಿದ್ಯಾರಣ್ಯ ಸರ್ಕಲ್ ನಲ್ಲಿರುವ ಆದಯ್ಯನ ಮೂರ್ತಿಗೆ ಹಾಗೂ ಪಂಪನ ಮೂರ್ತಿಗೆ ಮಾಲೆ ಹಾಕಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು.

Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ರೈತ ಸಂಘದ ನಿಡಗುಂದಿ ನಗರ ಘಟಕದ ಉದ್ಘಾಟನೆ
ರೈತ ಸಂಘ ರೈತ ಸ್ನೇಹಿ ಕಾರ್ಯ ಗೈಯಲಿ-ಶಿವಾನಂದ ಅವಟಿ

ಉತ್ತರಪ್ರಭ ಸುದ್ದಿನಿಡಗುಂದಿ: ಯಾವುದೇ ಸರಕಾರ ಇರಲಿ ಸದಾ ವಿರೋಧ ಪಕ್ಷದಂತೆ ಕಾರ್ಯನಿರ್ವಹಿಸಿ ರೈತರ ಸಮಸ್ಯೆ ನಿವಾರಿಸಲು…

ಸಹಕಾರ ಬ್ಯಾಂಕ್ ಗಳ ಮೂಲಕ ರೈತರಿಗೆ 20,810 ಕೋಟಿ ಬೆಳೆ ಸಾಲ-ಸಚಿವ ಸೋಮಶೇಖರ್

ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.