ಬೆಂಗಳೂರು: ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.
ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಮುಂದೂಡಲಾಗಿದ್ದು, ನ. 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನ. 2ರಂದು ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಲಾಗುವುದು ಎಂದು ಸೂಚಿಸಿದ್ದ ಆಯೋಗ, ಈಗ ಪರಿಷ್ಕೃತ ದಿನಾಂಕ ಪ್ರಕಟಿಸಿ ಸುತ್ತೋಲೆ ಹೊರಡಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿದಿದ್ದರು.