ನವದೆಹಲಿ : ಇಂದು ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿ, ಕರ್ನಾಟಕದ ನನ್ನ ಸಹೋದರ ಮತ್ತು
ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ ಕೋರಿದ ಹಿನ್ನೆಲೆಯಲ್ಲಿ ರಾಜ್ಯದ ಜನರು ಮೆಚ್ಚುಗೆ ಹಾಗೂ ಅಭಿನಂದನೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ, ರೀ ಟ್ವೀಟ್ ಮಾಡುತ್ತಿದ್ದಾರೆ. ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.