ಮಂಗಳೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ಬಿಜೆಪಿಯ ಎಲ್ಲ ಶಾಸಕರ ಪಾಡು ನಾಯಿಪಾಡಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ. 

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರು ಮೂಲೆಗುಂಪಾಗಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಈ ರೀತಿಯ ಮಾತುಗಳನ್ನು ಹೇಳುತ್ತಿದ್ದಾರೆ. ಒಬ್ಬ ಮಾಜಿ ಸಿಎಂ ಹಾಗೂ ಅನುಭವಿ ರಾಜಕಾರಣಿ, ಆದವರೂ ಈ ರೀತಿಯ ಮಾತುಗಳನ್ನು ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಾವು ನಿಶ್ಚಿತವಾಗಿಯೂ ಜಯ ಗಳಿಸಲಿದ್ದೇವೆ. ಆದರೂ ಈ ಫಲಿತಾಂಶದಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಗೆದ್ದ ನಂತರ ಮುನಿರತ್ನರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು. ಮಹದಾಯಿ ವಿಚಾರದಲ್ಲಿ ಗೋವಾದ ಪರವಾಗಿ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ, ಕಾಂಗ್ರೆಸ್ ನ ಇಬ್ಬಗೆಯ ನೀತಿಗೆ ಕಾರಣವಾಗಿದೆ ಎಂದು  ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ವಾರಾಂತ್ಯ ಕಪ್ಯೂ೯ಗೆ ಉತ್ತಮ ಸ್ಪಂದನೆ : ನಿಡಗುಂದಿ ಸ್ತಬ್ಧ- ಆಲಮಟ್ಟಿ ಗಾಡ್೯ನಗಳು ಬೀಕೋ

ನಿಡಗುಂದಿ : ಸದಾ ಜನಜಂಗುಳಿಯಿಂದ ಗಿಜಗುಡುತ್ತಿದ್ದ ಪ್ರಮುಖ ರಸ್ತೆಗಳೆಲ್ಲ ಭಾಗಶಃ ಖಾಲಿಖಾಲಿ. ಅಂಗಡಿ,ಮುಂಗಟ್ಟುಗಳೆಲ್ಲ ಬಾಗಿಲು ತೆರೆಯದ…

ಕೊರೋನಾ ಕಾವ್ಯ-9

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕಾವ್ಯ ಕಳುಹಿಸಿದವರು ಡಾ.ಸಂಗಯ್ಯ ಶೇ ಶಿರೂರಮಠ ಅವರು. ಪುಣೆಯ ಡಿಫೆನ್ಸ್ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಯದ ಗೂಡಿನಲ್ಲಿ ಒಂದಾದ ಜೀವಗಳ ತಲ್ಲಣವನ್ನು ಕಾವ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ.

ಇಂದು 7,012 ಪಾಸಿಟಿವ್!: ರಾಜ್ಯದ ಎಲ್ಲ ಜಿಲ್ಲೆಗಳ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ಮಾಲ್, ಹೋಟೆಲ್ ಜೂ. 21 ರಿಂದ ತೆರೆಯಲು ತಾಂತ್ರಿಕ ಸಮಿತಿ ಸಲಹೆ ಒಪ್ಪಿಗೆ? ಸಲಹೆಗಳೇನ್ನು

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಗುಂಪು ಗುಂಪು ಸೇರದಂತೆ ಮಾಲ್, ಹೋಟೆಲ್, ಇನ್ನಿತರ ಆರ್ಥಿಕ ಚಟುವಟಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.