ಮಂಗಳೂರು: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ಬಿಜೆಪಿಯ ಎಲ್ಲ ಶಾಸಕರ ಪಾಡು ನಾಯಿಪಾಡಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ. 

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರು ಮೂಲೆಗುಂಪಾಗಿದ್ದಾರೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಈ ರೀತಿಯ ಮಾತುಗಳನ್ನು ಹೇಳುತ್ತಿದ್ದಾರೆ. ಒಬ್ಬ ಮಾಜಿ ಸಿಎಂ ಹಾಗೂ ಅನುಭವಿ ರಾಜಕಾರಣಿ, ಆದವರೂ ಈ ರೀತಿಯ ಮಾತುಗಳನ್ನು ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ನಾವು ನಿಶ್ಚಿತವಾಗಿಯೂ ಜಯ ಗಳಿಸಲಿದ್ದೇವೆ. ಆದರೂ ಈ ಫಲಿತಾಂಶದಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಗೆದ್ದ ನಂತರ ಮುನಿರತ್ನರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು. ಮಹದಾಯಿ ವಿಚಾರದಲ್ಲಿ ಗೋವಾದ ಪರವಾಗಿ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ, ಕಾಂಗ್ರೆಸ್ ನ ಇಬ್ಬಗೆಯ ನೀತಿಗೆ ಕಾರಣವಾಗಿದೆ ಎಂದು  ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಆದುನಿಕತೆಯಲ್ಲಿ ಜಾನಪದ ಸಾಹಿತ್ಯ ಮರೆಯಾಗದಿರಲಿ: ದೊಡ್ಡಮನಿ

ಜಾನಪದ ಸಾಹಿತ್ಯ ಇಂದಿನ ಆಧುನಿಕ ಸ್ಪರ್ಶದಿಂದ ಕಣ್ಮರೆಯಾಗುತ್ತಿದ್ದು, ವೈಶಿಷ್ಟಪೂರ್ಣವಾದ ಈ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಜಿಮ್ಸನಲ್ಲಿ ಘಟಿಕೋತ್ಸವ : ಸಚಿವ ಪಾಟೀಲ ಹೇಳಿಕೆ

ವೈದ್ಯ ವೃತ್ತಿ ಪವಿತ್ರ ವೃತ್ತಿಯಾಗಿದ್ದು ವೈದ್ಯ ನಾರಾಯಣ ಭವೋ ಎಂಬ ಗಾದೆಗೆ ತಕ್ಕಂತೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ವೈದ್ಯ ಪದವಿ ಪಡೆದ ವಿಧ್ಯಾರ್ಥಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.