ಮಂಡ್ಯ : ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮೋಸ ಮಾಡಿದ್ದರ ಹಿನ್ನೆಲೆಯಲ್ಲಿ ನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದ್ದು, ತಾಯಿ ನೇತ್ರಾವತಿ (30), ಮಕ್ಕಳಾದ ಶೋಭಿತಾ (09), ನಂದೀಶ್ (07) ಮೃತ ದುರ್ದೈವಿಗಳಾಗಿದ್ದಾರೆ.

ಮೃತರಾಗಿರುವ ನೇತ್ರಾವತಿ ಅವರು ಪತಿ ಸೋಮನನ್ನು ಕಳೆದುಕೊಂಡಿದ್ದರು. ಹೀಗಾಗಿ ತನ್ನ ಮಕ್ಕಳ ಜೊತೆ ಗ್ರಾಮದಲ್ಲಿ ವಾಸಿಸುತ್ತಿದ್ದರು. ಈ ಸಂದರ್ಭದಲ್ಲಿ ನೇತ್ರಾವತಿಗೆ ಆನಂದ್ ಎಂಬ ಯುವಕನ ಪರಿಚಯವಾಗಿದೆ. ಆತ, ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಆದರೆ, ಇತ್ತೀಚೆಗೆ ಆತ, ಬೇರೆ ಮದುವೆಯಾಗಲು ಸಿದ್ಧತೆ ನಡೆಸಿದ್ದ. ಈ ಕುರಿತು ರಾಜಿ ಪಂಚಾಯಿತಿ ಕೂಡ ನಡೆದಿತ್ತು.

ಆದರೆ, ಅಲ್ಲಿ ನೇತ್ರಾವತಿಗೆ ಅನ್ಯಾಯವಾಗಿದೆ. ಹೀಗಾಗಿ ಅವರು, ತನ್ನ ಮಕ್ಕಳಿಬ್ಬರಿಗೆ ವಿಷ ನೀಡಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅರೆಬೆತ್ತಲೆ ಪೇಂಟಿಂಗ್ ಮಾಡಿಸಿಕೊಂಡ ಮಾಡೆಲ್..!

ಪಟ್ಟಣಂತಿಟ್ಟು : ಶಬರಿ ಮಲೆ ದೇವಾಲಯ ಪ್ರವೇಶಿಸಿ ವಿವಾದ ಎಬ್ಬಿಸಿದ್ದ ರೆಹನಾ ಫಾತಿಮಾ ಮತ್ತೊಂದು ಅವಾಂತರ…