ರಾಜ್ಯದಲ್ಲಿನ ಎರಡು ಕ್ಷೇತ್ರಗಳಿಗೆ ಇಂದು ಮತದಾನ!

ಬೆಂಗಳೂರು :  ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

 ಬೆಳಿಗ್ಗೆ 7ರಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಕೊರೊನಾ ಸಮಯದಲ್ಲಿಯೇ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಸ್ಪರ್ಧಿಸಿದ್ದು, ಮೂವರ ನಡುವೆಯೂ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ಗೌಗಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ. ಶಿರಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 330 ಮತಗಟ್ಟೆಗಳಿವೆ. 

ಶಿರಾದಲ್ಲಿ 2,15,725 ಜನ ಮತದಾರರು ಇದ್ದಾರೆ. ಆರ್.ಆರ್. ನಗರದಲ್ಲಿ 4,62,000 ಸಾವಿರ ಮತದಾರರು ಇದ್ದಾರೆ. 

Exit mobile version