ಹೊಳೆಯಾಲೂರು: ಮಲಪ್ರಭಾ ನದಿಯಲ್ಲಿ ಮೊಸಳೆ ಪತ್ತೆಯಾಗಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ.
ಗದಗ ಜಿಲ್ಲೆ ರೊಣ ತಾಲೂಕಿನ ಹೊಳೆಆಲೂರ ಗ್ರಾಮದ ಮಲಪ್ರಭಾ ನದಿಯಲ್ಲಿ ಬುಧುವಾರ ಸಂಜೆ ಮೊಸಳೆ ಪ್ರತ್ಯಕ್ಷವಾಗಿಜe. ಮೊಸಳೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಪ್ರವಾಹದಿಂದ ಮಲಪ್ರಭ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದಾಗಿಯೇ ಮೊಸಳೆಗಳು ಬಂದಿರಬಹುದು ಎನ್ನುವುದು ಗ್ರಾಮಸ್ಥರ ಅಭಿಪ್ರಾಯ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಮುಂಜಾಗೃತ ಕ್ರಮವಾಗಿ ನದಿ ತೀರಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಡಂಗೂರ ಸಾರಲಾಗಿದೆ.
