ಶಾಲೆಗಳು ಪ್ರಾರಂಭವಾಗಲು ಕೂಡಿ ಬಂದಿದೆಯೇ ಮುಹೂರ್ತ!?

ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ರಾಜ್ಯದಲ್ಲಿ ಶಾಲೆಗಳು ಮುಚ್ಚಿವೆ. ಆದರೆ, ಸದ್ಯ ಕೊರೊನಾ ತಗ್ಗುತ್ತಿದ್ದು, ಶಾಲೆಗಳನ್ನು ತೆರೆಯುವ ಕುರಿತು ಚಿಂತನೆ ನಡೆಯುತ್ತಿದೆ.

ಶಾಲೆಗಳನ್ನು ಪ್ರಾರಂಭಿಸುವುದಕ್ಕಾಗಿ ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನ. 4ರಿಂದ 6ರ ವರೆಗೆ ಸಭೆ ನಡೆಸಲಿದ್ದು, 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಶಾಲೆಗಳ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಅಲ್ಲದೇ, ಇವುಗಳೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಕುರಿತು ಕೂಡ ಚರ್ಚೆ ನಡೆಯಲಿದೆ. 

ಈಗಾಗಲೇ ಆಂಧ್ರಪ್ರದೇಶದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿಯೇ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ನವೆಂಬರ್ ಕೊನೆಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಹಂತ–ಹಂತವಾಗಿ ಶಾಲೆಗಳನ್ನು ಆರಂಭಿಸುವ ಚಿಂತನೆ ಇದೆ ಎಂದು ತಿಳಿದು ಬಂದಿದೆ. 

Exit mobile version