ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಲ್ಲಿಯ ಬನಶಂಕರಿ ನಗರದಲ್ಲಿರುವ ಬನಶಂಕರಿ ದೇವಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಪೋಸ್ಟ್ ಹಾಕಿದ್ದ ಡಿಕೆಶಿ, ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ಎಲ್ಲ ಮತದಾರರಿಗೂ ಧನ್ಯವಾದಗಳು ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರಿಗೂ ಧನ್ಯವಾದಗಳನ್ನು ಡಿಕೆಶಿ ಅರ್ಪಿಸಿದ್ದರು.

ಡಿಕೆಶಿ ಅವರು ಕೆಪಿಸಿಸಿ ಸಾರಥ್ಯ ವಹಿಸಿಕೊಂಡ ನಂತರ, ಅವರು ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದಾರೆ. ಹೀಗಾಗಿ ಅವರಿಗೆ ಈ ಎರಡೂ ಕ್ಷೇತ್ರಗಳ ಚುನಾವಣೆ ಪ್ರತಿಷ್ಠೆಯಿಂದ ಕೂಡಿದೆ. ಈಗಾಗಲೇ ಶಿರಾದಲ್ಲಿ 84.54ರಷ್ಟು ಹಾಗೂ ರಾಜರಾಜೇಶ್ವರಿ ನಗರದಲ್ಲಿ 45.24ರಷ್ಟು ಮತದಾನವಾಗಿದೆ. ನ. 10ರಂದು ಫಲಿತಾಂಶ ಹೊರ ಬೀಳಲಿದೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಾ ಒಳಾಂಗಣ ಕ್ರೀಡಾಂಗಣದ ನೂತನ ಕಟ್ಟಡದ ಉದ್ಘಾಟನೆ

ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಸುಮಾರು 1.90 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಶಾಸಕ ಕಳಕಪ್ಪ ಬಂಡಿ ಉದ್ಘಾಟಿಸಿದರು.

ಹಕ್ಕಿ ಜ್ವರದ ಆತಂಕದ ನಡುವೆಯೇ ಗದಗ ಜಿಲ್ಲೆಯಲ್ಲಿ ಹಕ್ಕಿಗಳ ಸಾವು

ಇದೀಗ ಹಕ್ಕಿ ಜ್ವರದ ಸುದ್ದಿಯೇ ಸದ್ದು ಮಾಡುತ್ತಿದೆ. ಜನರು ಈ ಆತಂಕದಲ್ಲಿರುವಾಗಲೇ ಗದಗ ಜಿಲ್ಲೆ ಡಂಬಳ ಗ್ರಾಮದಲ್ಲಿ ಹಕ್ಕಿಗಳು ಏಕಾಏಕಿ ಸಾವನ್ನಪ್ಪಿರುವುದು ಇಲ್ಲಿನ ಜನರನ್ನು ಗಾಬರಿಗೊಳಿಸಿದೆ.

ಬಿಎಂಟಿಸಿಗೆ ಡಿಜಿಟಲ್ ಸ್ಪರ್ಷ: ಡಿಜಿಟಲ್ ಹಣ ನೀಡಿ ಟಿಕೇಟ್ ಪಡೆಯಲು ಅವಕಾಶ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಪ್ರಯಾಣಿಕರು ಹಾಗೂ ಸಿಬ್ಬಂಧಿಗಳ ಹಿತದೃಷ್ಟಿಯಿಂದ ಬಿಎಂಟಿಸಿ ಡಿಜಿಟಲ್ ಗೆ ಮಾರು ಹೋಗಿದೆ.ಫೋನ್…

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…