ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಇಂದು 3 ಸಾವಿರದ ಗಡಿ ದಾಟಿದೆ. ನಿನ್ನೆಗೆ ಹೋಲಿಕೆ ಮಾಡಿದರೆ, ಇಂದು ಏರಿಕೆ ಕಂಡಿದೆ.

ಇಂದು 3,377 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆ ಕಂಡಿದೆ. 

ರಾಜ್ಯದಲ್ಲಿ ವೈರಸ್ ನಿಂದಾಗಿ ಕಳೆದ 24 ಗಂಟೆಗಳಲ್ಲಿ 34 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,281ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಅಲ್ಲದೇ, ಇಂದು 8,045 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 7,88,780ಕ್ಕೆ ಏರಿಕೆ ಕಂಡಿದೆ. 35,693 ಜನ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇಂದು ಬೆಂಗಳೂರು ನಗರವೊಂದರಲ್ಲಿಯೇ ಅತೀ ಹೆಚ್ಚು ಅಂದರೆ 1,953 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,43,507ಕ್ಕೆ ಏರಿಕೆ ಕಂಡಿದೆ. ಲ್ಲದೇ, ಇಂದು ನಗರದಲ್ಲಿ 16 ಜನ ಸಾವನ್ನಪ್ಪಿದ್ದಾರೆ. 

Leave a Reply

Your email address will not be published. Required fields are marked *

You May Also Like

ಎಮ್ಎಲ್ಎ ಸಾಹೇಬ್ರಿಗೆ ಹೇಳಿ ಹೇಳಿ ಸಾಕಾಗಿ ಹೋಯ್ತು!: ರೈತರ…, ರೊಕ್ಕಾ ಹಾಕಿ ರಸ್ತೆ ರಿಪೇರಿ ಮಾಡಸಾಕತ್ತಾರ..!

ಸಾಕಷ್ಟು ರೈತರು ತಮ್ಮ ಹೊಲಗಳಿಗೆ ದಾರಿ ಇಲ್ಲದೆ ಪರದಾಡುವ ಪರಿಸ್ಥಿತಿಯಲ್ಲಿ, ದಾರಿ ಸರಿಪಡಿಸುವಂತೆ ಪರಿ ಪರಿಯಾಗಿ ಬೇಡಿದರೂ ಸ್ಥಳೀಯ ಶಾಸಕರು ಮಾತ್ರ ಸ್ಪಂದಿಸದೆ ಇರುವುದು ಶಾಸಕರು ಬೇಜವ್ದಾರಿಗೆ ಹಿಡಿದ ಕೈಗನ್ನಡಿಯಂತಾಗಿದೆ.

ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ 

ಗಜೇಂದ್ರಗಡ: ತೀವೃ ಕುತೂಹಲ ಕೆರಳಿಸುವುದಲ್ಲದೇ, ಪೈಪೋಟಿಗೆ ಕಾರಣವಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.

ಸಿಎಂಗೆ ಕೊರೊನಾ ಪಾಸಿಟಿವ್ ದೃಢ!

ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಗದಗ ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170…