ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಮಹಾಮಾರಿಯ ಅಬ್ಬರ ಶುರುವಾಗಿದೆ. ಅಲ್ಲದೇ, ನಗರದಲ್ಲಿ ಮೂರನೇ ಅಲೆ ಶುರುವಾಗಿದೆ ಎಂಬ ಆತಂಕ ಶುರುವಾಗಿತ್ತು. ಸದ್ಯ ಮೂರನೇ ಅಲೆ ಶುರುವಾಗಿರುವುದನ್ನು ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ ಒಪ್ಪಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ಮೂರನೇ ಅಲೆ ಎಂದು ಕರೆಯಬಹುದು.

ಈ ಬಗ್ಗೆ ಜನತೆ ಆತಂಕ ಪಡುವ ಅಗತ್ಯ ಇಲ್ಲ. ಸರ್ಕಾರವು ನಿಯಮಿತವಾಗಿ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದೆ. ಮಹಾಮಾರಿಯನ್ನು ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಕೊರೊನಾ ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡುವುದು ಮತ್ತು ಸಾವಿನ ಪ್ರಮಾಣ ಸಾಧ್ಯವಾದಷ್ಟು ಕಡಿಮೆ ಇಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ.