ಮೈಸೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ. ಅದರ ಬಗ್ಗೆ ಮಾತನಾಡಿದರೆ, ನಮ್ಮ ಅಧಿಕಾರವು ಹೋಗಬಹುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರ ಮಾಡುವುದು ಹಾಗೂ ಗೆಲುವು, ಸೋಲಿನ ಲೆಕ್ಕ ಹಾಕುವುದಷ್ಟೇ ನಮ್ಮ ಕೆಲಸ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದು ನಮ್ಮ ಕೆಲಸವಲ್ಲ. 

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆದ್ದು ಬೀಗಲಿದೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಈಗಾಗಲೇ ಸೋಲು ಒಪ್ಪಿಕೊಂಡಿದ್ದಾರೆ.

ಇವಿಎಂ ಯಂತ್ರಗಳ ಮೇಲೆ ಆರೋಪ ಮಾಡುವ ಮೂಲಕ ಪರೋಕ್ಷವಾಗಿ ಅವರು ಸೋಲು ಒಪ್ಪಿಕೊಂಡಿದ್ದಾರೆ. ಅವರ ಮಾತುಗಳನ್ನು ಕೇಳಿದರೆ, ಅವರಿಗೆ ಫಲಿತಾಂಶ ಬರುವವರೆಗೂ ತಾಳ್ಮೆ ಇಲ್ಲದಾಗಿದೆ ಎಂದು ಹೇಳಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ನಮ್ಮ ಅಭ್ಯರ್ಥಿ ಮುನಿರತ್ನ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಯಾರ ತಂತ್ರವೂ ನಿಲ್ಲುವುದಿಲ್ಲ. ಕಾಂಗ್ರೆಸ್ ಯಾವುದೇ ರೀತಿಯ ತಂತ್ರ ಮಾಡಿದರೂ ಜನ ಬಿಜೆಪಿ ಪರವಾಗಿದ್ದಾರೆ. ಅಭಿವೃದ್ಧಿ ಕೆಲಸಗಳೇ ನಮ್ಮ ಪಕ್ಷದ ಕೈ ಹಿಡಿಯಲಿವೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ರೈತರ ಸಾಲ ಮನ್ನಾ ಮಾಡಿದ ಸರ್ಕಾರ

ಬ್ಯಾಂಕುಗಳಲ್ಲಿ ಬಾಕಿ ಉಳಿದ 57,229 ರೈತರ 295 ಕೋಟಿ ರೂ. ಸಾಲವನ್ನು ಸರ್ಕಾರ ಮನ್ನಾ ಮಾಡಿದೆ.

ಪುರಸಭೆ ಸದಸ್ಯನಿಗೆ ಕೊರೊನಾ ಪಾಸಿಟಿವ್

ಪಟ್ಟಣದ ಪುರಸಭೆ ಸದಸ್ಯರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಮಾಸಂಗಿಪುರದ ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಶಾಲೆಗಳಿಗೆ ತಹಶಿಲ್ದಾರ ಸತೀಶ್ ಕೂಡಲಗಿ ಭೇಟಿ- ಕಾನೂನು ಸುವ್ಯವಸ್ಥೆ ಪರಿಶೀಲನೆ ಖುಷಿಯಿಂದ ಶಾಲೆಗೆ ಮರಳಿದ ಮಕ್ಕಳು

ಚಿತ್ರ ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಜಾಬ್- ಕೇಸರಿ ಜಟಾಪಟಿ ವಿವಾದದಿಂದ ಆತಂಕ ಸೃಷ್ಟಿಯಾಗಿ…

ಖಾಸಗಿ ಅನುದಾನ ರಹಿತ ಶಾಲೆಗಳ ಶುಲ್ಕ ಹೆಚ್ಚಳ ಬೇಡ: ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ಶಾಲಾ ಶುಲ್ಕಗಳನ್ನು ಪರಿಷ್ಕರಿಸದಂತೆ ರಾಜ್ಯ ಸರ್ಕಾರ…