ಲಕ್ಷ್ಮೇಶ್ವರ: ಇಲ್ಲಿನ ಪುರಸಭೆಗೆ ಚುನಾವಣೆ ನಡೆದು 23 ತಿಂಗಳ ನಂತರ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಅಧ್ಯಕ್ಷ ಸ್ಥಾನಕ್ಕೆ ಪೂರ್ಣಿಮಾ ಎಂ.ಪಾಟೀಲ್ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಯಾಗಿದ್ದ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಅಧ್ಯಕ್ಷ ಸ್ಥಾನದ ಅವಿರೋಧವಾಗಿ ಆಯ್ಕೆ ಕುರಿತು ಘೋಷಿಸಿದರು. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ರಾಮಪ್ಪ ಬಿ.ಗಡದವರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅದು ಕೂಡ ಅವಿರೋಧ ಆಯ್ಕೆಯಾಯಿತು.

ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕಿಯೆ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಚುನಾವಣೆ ಅಧಿಕಾರಿಯಾಗಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಉಪತಹಶೀಲ್ದಾರ ಮಂಜುನಾಥ ದಾಸಪ್ಪನವರ, ಕಂದಾಯ ನಿರೀಕ್ಷಕ ಬಸವರಾಜ ಕಾತರಾಳ, ಮುಖ್ಯಾಧಿಕಾರಿ ಎಸ್.ಎಸ್.ಹುಲ್ಲಮ್ಮನವರ, ಆನಂದ ಬದಿ, ಮಂಜುನಾಥ ಮುದಗಲ್ ಆರ್.ಎಂ.ಪಾಟೀಲ್ ಹಾಜರಿದ್ದರು. ಸಿಪಿಐ ವಿಕಾಸ್ ಲಮಾಣಿ ನೇತೃತ್ವದಲ್ಲಿ ಪಿಎಸ್ಐ ಶಿವಯೋಗಿ ಲೋಹಾರ ಬಂದೋಬಸ್ತ ಒದಗಿಸಿದ್ದರು.

Leave a Reply

Your email address will not be published. Required fields are marked *

You May Also Like

ಆರ್ ಆರ್ ನಗರ, ಶಿರಾದಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ!

ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು: ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ…

ಚಿಕ್ಕನರಗುಂದ ಗ್ರಾ.ಪಂ ಅಧ್ಯಕ್ಷರಾಗಿ ಲಕ್ಷ್ಮಣ ಕಂಬಳಿ ಅವಿರೋಧ ಆಯ್ಕೆ

ಉತ್ತರಪ್ರಭ ನರಗುಂದ: ತಾಲ್ಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ 3…