ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.
ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕೊಲೆಯಿಂದಾಗಿ ಯೋಗೇಶ್ ಗೌಡ ಅವರ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದಾರೆ. ಆದರೆ, ಸಿಬಿಐ ತನಿಖೆಯಿಂದ ಇದರ ಹಿಂದಿನ ಸತ್ಯ ಹೊರ ಬರಲಿದೆ. ಈ ಪ್ರಕರಣಕ್ಕೆ ನ್ಯಾಯ ಸಿಗುವಂತಾಗಲಿ. ಸಿಬಿಐ ತನಿಖೆಯಿಂದ ನಿಜಾಂಶ ಹೊರಗೆ ಬರಲಿ. ಅಲ್ಲದೇ, ಯೋಗೇಶ್ ಗೌಡ ಅವರ ಕುಟುಂಬಕ್ಕೆ ನ್ಯಾಯ ಸಿಗುವಂತೆ ಆಗಲಿ ಎಂದು ಹೇಳಿದ್ದಾರೆ.
ಸಿಬಿಐ ತನಿಖೆಯಲ್ಲಿ ತಮ್ಮ ಹಸ್ತಕ್ಷೇಪ ಇದೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಇದರಲ್ಲಿ ಯಾವುದೇ ಹುರುಳು ಇಲ್ಲ.
ಇದರಲ್ಲಿ ರಾಜ್ಯ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರುವ ಸಂಗತಿ ಸತ್ಯಕ್ಕೆ ದೂರ ಎಂದು ಹೇಳಿದ್ದಾರೆ.
