ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

2017ರಲ್ಲಿ ಯೋಗೀಶ್ ಗೌಡ ಅವರ ಕೊಲೆ ನಡೆದಿತ್ತು. ಇಲ್ಲಿಯ ಸಪ್ತಾಪುರ ಜಿಮ್‍ ಗೆ ತೆರಳಿದ್ದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ತಳಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯ ಸರ್ಕಾರವು 2019ರಲ್ಲಿ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ, ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ ಹಾಗೂ ಮಹಾಬಲೇಶ್ವರ ಹೊಂಗಲ್ ಅವರ ವಿರುದ್ಧ ಪ್ರಕರಣ ದಾಖಲಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು ಇಳಿಕೆ ಕಂಡ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.