ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 12 ಸಾವಿರ ಗೌರವ ಧನ ನೀಡುವ ಕುರಿತು ಚಿಂತನೆ ನಡೆದಿದ್ದು, ಶೀಘ್ರದಲ್ಲಿಯೇ ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ರೂ. 12 ಸಾವಿರ ಗೌರವ ಧನ ನೀಡಬೇಕು ಎಂಬ ಕೂಗು ಬಹು ದಿನಗಳ ಬೇಡಿಕೆಯಾಗಿತ್ತು. ಈ ಕುರಿತು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ. ಹೀಗಾಗಿ ಕ್ರಮ ಕೈಗೊಳ್ಳುವ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವ ಧನ ನೀಡುವ ಕುರಿತು ಶೀಘ್ರದಲ್ಲಿಯೇ ಮಹತ್ವದ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ಸಚಿವ ವಿನಯ್ ಗೆ ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು.

ಮುಳಗುಂದ ಅಬ್ಬಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ: ಸಾರ್ವಜನಿಕರ ಸಯೋಗದಲ್ಲಿ ಕೆರೆ ಅಭಿವೃದ್ದಿಗೆ ಸಲಹೆ.

ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಮಳೆಯಿಂದ ಭರ್ತಿಯಾಗಿರುವ ಅಬ್ಬಿ ಕೆರೆ ವೀಕ್ಷಣೆ ಮಾಡಿದರು. ನಂತರ ಸ್ಥಳಿಯ ಮುಖಂಡರೊಂದಿಗೆ ಚರ್ಚಿಸಿದ ಅವರು ಜಿಲ್ಲೆಯಲ್ಲಿ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಕೆರೆಗಳನ್ನು ಜನಪ್ರತಿನಿಧಿಗಳು, ಸಾರ್ವಜನಿಕರು ಕೆರೆ ಅಭಿವೃದ್ದಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ದಿಗೆ ಮುಂದಾಗಬೇಕು. ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲ ವೃದ್ದಿಸುವುದರ ಜತೆಗೆ ರೈತರಿಗೂ ನೀರಿನ ಬವಣೆ ನೀಗಲಿದೆ. ಈಗಾಗಲೇ ಮಳೆಯಿಂದ ಕೆರೆಗಳು ಭರ್ತಿಯಾಗಿದ್ದು ಕೆರೆ ದಡದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡಬೇಕು ಎಂದು ಸಲಹೆ ನೀಡಿದರು.

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಮದ್ಯಕ್ಕೆ ಕೊಡುವ ಪ್ರೋತ್ಸಾಹ ವಿದ್ಯೆಗೆ ನೀಡಿ- ಗುರುಶಾಂತ ಸ್ವಾಮೀಜಿ

ವರದಿ: ಗುಲಾಬಚಂದ ಜಾಧವ ಆಲಮಟ್ಟಿ : ಬಹಳಷ್ಟು ಯುವಕರ ಮನಸ್ಥಿತಿಯಿಂದು ಕೆಟ್ಟು ಹೋಗುತ್ತಲ್ಲಿದೆ. ದುಷ್ಚಟಗಳ ದಾಸರಾಗಿ…