ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದರಿಂದಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇದೊಂದು ಸಾಮಾಜಿಕ ಪಿಡುಗಾಗಿದೆ. ಹೀಗಾಗಿ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದರ ವಿರುದ್ಧ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಲವ್ ಜಿಹಾದ್ ತಡೆಗಟ್ಟುವ ನಿಟ್ಟಿನಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನು ತರುವ ಪ್ರಯತ್ನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಇಂತಹ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನು ತಜ್ಞರ ಜೊತೆ ಚರ್ಚಿಸಿ, ನಂತರ ಈ ಕಾನೂನು ತರುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಷಯ ದೇಶಾದ್ಯಂತ ಏಳೆಟುಂ ವರ್ಷಗಳಿಂದ ಚರ್ಚೆಯಾಗುತ್ತಿದೆ. ದೇಶದಲ್ಲಿನ ಸುಮಾರು ಏಳೆಂಟು ರಾಜ್ಯಗಳಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಹೆಚ್ಚಾಗುತ್ತಿರುವ ಪ್ರಕರಣಗಳು ಕೂಡ ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರಗಳು, ಕ್ರಮ ಜರುಗಿಸಲು ಮುಂದಾಗಿವೆ.

Exit mobile version