ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ಧಾರವಾಡದ 32ನೇ ಸೆಷನ್ ಕೋರ್ಟ್ ಈ ಆದೇಶ ಹೊರಡಿಸಿದೆ. ಗುರುವಾರ ಬೆಳಿಗ್ಗೆ ಸಿಬಿಐ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸಂಜೆ ವೇಳೆಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ಸಂದರ್ಭದಲ್ಲಿ ವಿಚಾರಣೆ ನಡೆಸಿದ್ದ ಕೋರ್ಟ್, ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿತ್ತು.
ಹೀಗಾಗಿ ಇಂದು ಅವ ಬಂಧನದ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಹಾಗೂ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಷ್ಟೇ ಅಲ್ಲದೆ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದ ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶಿಸಿದೆ.
