ತಿರುವನಂತಪುರಂ: ಅಯ್ಯಪ್ಪಸ್ವಾಮಿ ದೇಗುಲ ಶಬರಿಮಲೈಗೆ ಹೋಗುವ ಮುನ್ನ ಭಕ್ತಾದಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.
ಶಬರಿಮಲೈನಲ್ಲಿ ನಡೆಯುವ ಮಂಡಲ-ಮಕರ ಹಾಗೂ ವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಹಾಗೂ ಸಾರ್ವಜನಕರ ಗಮನಕ್ಕೆ ಕೇರಳ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಎಲ್ಲಾ ಯತ್ರಾರ್ಥಿಗಳು https://sabarimalaonline.org/ ವೆಬ್ ಸೈಟ್ ನ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು.
ಮಾರ್ಗಸೂಚಿಗಳು
- ಶಬರಿಮಲೈಗೆ ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ.
- ಪ್ರವೇಶ ಸ್ಥಳದಲ್ಲಿ Angtigen Test ಅವಕಾಶ ಕಲ್ಪಿಸಲಾಗಿದ್ದು, ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕಾಗಿರುತ್ತದೆ.
- ಹತ್ತು ವರ್ಷಗಳ ಒಳಪಟ್ಟು ಮತ್ತು 60-65 ವರ್ಷಗಳಿಗೆ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದ/ ಕಾಯಿಲೆಯ ಲಕ್ಷಣಗಳು ಇರುವಂತಹವರಿಗೆ ಯಾತ್ರಾ ಪ್ರದೇಶಕ್ಕೆ ಅನುಮತಿ ಇರುವುದಿಲ್ಲ.
- ಬಿಪಿಇಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅದನ್ನು ಹೊಂದಿರಬೇಕು.
- ತುಪ್ಪದ ಅಭಿಷೇಕ, ಪಂಪಾ ನದಿ ಸ್ನಾನ, ಸನ್ನಿಧಾನದಲ್ಲಿ ರಾತ್ರಿ ತಂಗುವುದು ಹಾಗೂ ಪಂಪಾ ಮತ್ತು ಗಣಪತಿ ದೇವಸ್ಥಾನ ಅವಕಾಶವಿರುವುದಿಲ್ಲ.
- ಯಾತ್ರಾರ್ಥಿಗಳು ಎರುವೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಪ್ರಯಾಣಿಸಲು ಅವಕಾಶ
ಶಬರಿಮಲೈ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ನ.16ರಿಂದ ಆರಂಭವಾಗುವ ಹಬ್ಬದ ದಿನಗಳಲ್ಲಿ ಎಲ್ಲಾ ಭಕ್ತರನ್ನು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ತಿರುಬಂಕೂರು ದೇವಸ್ವಂ ಮಂಡಳಿ ತಿಳಿಸಿದೆ.