ನವದೆಹಲಿ:  ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಭಾರತೀಯ ತಂತ್ರಜ್ಞಾನ ಸಂಸ್ಥೆಯ 51ನೇ ವಾರ್ಷಿಕ ಸಮ್ಮೇಳನದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆತ್ಮನಿರ್ಭರ ಅಭಿಯಾನ ಇಂದಿನ ಯುವ ಜನತೆಗೆ ಹೊಸ ಅವಕಾಶಗಳನ್ನೇ ತೆರೆದಿಡುತ್ತಿದ್ದು, ಈ ಮೂಲಕ ಪ್ರತಿಯೊಬ್ಬರೂ ಸೃಜನಶೀಲತೆಯನ್ನು ಮುಕ್ತವಾಗಿ ತೋರಿಸಬಹುದು ಎಂದು ಹೇಳಿದ್ದಾರೆ. 

ಇಂದು ಭಾರತ ದೇಶದಲ್ಲಿ ಯುವಕರಿಗೆ ಸುಲಭವಾಗಿ ಉದ್ಯಮ ನಡೆಸಲು ಪೂರಕವಾಗುವಂತಹ ವಾತಾವರಣ ನಿರ್ಮಿಸಿಕೊಡಬೇಕಾಗಿದೆ. ಆ ಮೂಲಕ ತಮ್ಮ ಸಂಶೋಧನೆಗಳೊಂದಿಗೆ ಕೋಟ್ಯಾಂತರ ಭಾರತೀಯರ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದ್ದಾರೆ. 

ಕೊರೊನಾ ನಂತರ, ವಿಶ್ವದ ಚಿತ್ರಣವೇ ಬದಲಾಗಲಿದ್ದು, ತಂತ್ರಜ್ಞಾನ ಬಹಳ ದೊಡ್ಡ ಪಾತ್ರ ವಹಿಸಲಿದೆ. ನಿಮ್ಮ ನಿಮ್ಮಲ್ಲಿಯೇ ಸವಾಲುಗಳನ್ನು ಇಟ್ಟುಕೊಂಡು ಪ್ರತಿದಿನ ಹೊಸ ಹೊಸ ವಿಷಯಗಳನ್ನು ಕಲಿಯುತ್ತ ಸಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ. ವಿನಯತೆ ಅಥವಾ ನಮ್ರತೆ, ನಿಮ್ಮ ಯಶಸ್ಸು, ಸಾಧನೆ ಬಗ್ಗೆ ನಿಮಗೆ ಹೆಮ್ಮೆಯಿರಬೇಕು, ನೀವು ಮಾಡಿರುವ ಸಾಧನೆಯನ್ನು ಕೆಲವೇ ಕೆಲವರು ಮಾಡಿರುತ್ತಾರೆ. ಸಾಧನೆ ಮಾಡಿದ ನಂತರ ನಿಮ್ಮಲ್ಲಿ ವಿನಯತೆ ಮತ್ತಷ್ಟು ಹೆಚ್ಚಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…

ಮಸ್ಕಿ: ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಮಂಜೂರು

ತಾಲೂಕ ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಭರವಸೆ ನೀಡಿದರು.

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.