ವಾಷಿಂಗ್ಟನ್ : ಗಂಡು ಬೇಕೆಂದು ಡಜನ್ ಗಟ್ಟಲೇ ಹೆಣ್ಣು ಮಕ್ಕಳನ್ನು ಹೆತ್ತವರ ಕಥೆಗಳನ್ನು ನಾವು ಕೇಳಿದ್ದೇವೆ. ಆದರೆ, ಇಲ್ಲೊಂದು ದಂಪತಿ ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಜನ ಗಂಡು ಮಕ್ಕಳನ್ನು ಹೆತ್ತಿದ್ದಾರೆ.

ಅಮೆರಿಕದ ಮಿಚಿಗಾನ್ ರಾಜ್ಯದಲ್ಲಿ ಈ ಘಟನೆ ನಡೆದಿದೆ. ಕಟೇರಿ ಶ್ವಾಂಡ್ಟ್ ಎಂಬುವವರೇ ಈ ಪ್ರಯತ್ನದಲ್ಲಿ ಯಶಸ್ವಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಸದ್ಯ 14 ಜನ ಸಹೋದರರು ತಮ್ಮ ಸಹೋದರಿ ಮ್ಯಾಗಿ ಜಯ್ನೆಯನ್ನು ಸ್ವಾಗತಿಸಿ ಸಂಭ್ರಮಿಸಿದ್ದಾರೆ. ಗ್ರ್ಯಾಂಡ್ ರಾಪಿಡ್ಸ್ ನ ಮರ್ಸಿ ಹೆಲ್ತ್ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಮ್ಯಾಗಿ ಜನಿಸಿದ್ದಾಳೆ. ಈ ದಂಪತಿಗಳಿಬ್ಬರೂ 45 ವರ್ಷದವರಾಗಿದ್ದಾರೆ. ಹೆಣ್ಣು ಮಗು ಹುಟ್ಟಿದ್ದಕ್ಕೆ ಇವರು ದೊಡ್ಡ ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ಮ್ಯಾಗಿ ಜಯ್ನೆಯನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದೆವು.

ಈ ವರ್ಷ ಹೆಣ್ಣು ಮಗು ಸಿಕ್ಕಿದ್ದರಿಂದ ಹಿಡಿದು, ಸಾಕಷ್ಟು ರೀತಿಯ ಸಂತಸಗಳು ಆಗಿವೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ನಾವು ಈ ಘಳಿಗೆ ನಮ್ಮ ಬದುಕಿನಲ್ಲಿ ಬರುತ್ತದೆ ಎಂದು ಊಹಿಸಿರಲಿಲ್ಲ ಎಂದು ಜೇ ಸಂತಸ ವ್ಯಕ್ತಪಡಿಸಿದ್ದಾರೆ.

ಕಟೇರಿ ಹಾಗೂ ಜೇ ಗೇಲಾರ್ಡ್ ಹೈ ಸ್ಕೂಲ್ ಹಾಗೂ ಗೇಲಾರ್ಡ್ ಸೇಂಟ್ ಮೇರಿಸ್ ಹೈ ಸ್ಕೂಲ್ ನಿಂದ ಡೇಟಿಂಗ್ ಮಾಡುತ್ತಿದ್ದರು. 1993ರಲ್ಲಿ ಇಬ್ಬರೂ ಫೇರಸ್ ಸ್ಟೇಟ್ ವಿಶ್ವವಿದ್ಯಾಲಯಕ್ಕೆ ಸೇರಿದ್ದಾರೆ. ಪದವೀಧರರಾಗುವ ಮೊದಲೇ ಅವರಿಗೆ ಮೂವರು ಗಂಡು ಮಕ್ಕಳು ಜನಿಸಿದ್ದರು. ಕುಟುಂಬದೊಂದಿಗೆ ಓದನ್ನೂ ಈ ದಂಪತಿ ಮುಂದುವರೆಸಿಕೊಂಡು ಹೋಗಿದ್ದರು.

ಕಟೇರಿ ಅವರು ವೇಲ್ಲಿ ಸ್ಟೇಟ್ ವಿಶ್ವವಿದ್ಯಾಲಯದಲ್ಲಿ ಸಾಮಾಜಿಕ ಕಾರ್ಯದಲ್ಲಿ ಮಾಸ್ಟರ್ ಡಿಗ್ರಿ ಪೂರೈಸಿದ್ದೆ, ಜೇ ಅವರು ವೆಸ್ಟರ್ನ್ ಮಿಚಿಗನ್ ವಿಶ್ವವಿದ್ಯಾಲಯದ ಥಾಮಸ್ ಎಂ ಕೂಲೆ ಲಾ ಶಾಲೆಯಲ್ಲಿ ಕಾನೂನು ಪದವಿ ಪಡೆದಿದ್ದಾರೆ, ಜೇ ವೃತ್ತಿಯಲ್ಲಿ ವಕೀಲರಾಗಿದ್ದು ಭೂ ಸಮೀಕ್ಷೆ ವ್ಯವಹಾರ ಹೊಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕೋವಿನ್ ಪೋರ್ಟಲ್ ಲಭ್ಯ

ಕೋವಿನ್ ಪೋರ್ಟಲ್ ಹಿಂದಿ ಸೇರಿದಂತೆ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.

ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಉತ್ತರಪ್ರಭ ಸುದ್ದಿ ತಮಿಳುನಾಡು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.…

ಆಮ್ಲಜನಕ ಟ್ಯಾಂಕ್ ಸೋರಿಕೆ : 11 ಸಾವು

ಮಹರಾಷ್ಟçದ ನಾಸಿಕ್‌ನಲ್ಲಿ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕ್ ಸೋರಿಕೆಯಿಂದ 11 ಜನ ಸಾವನ್ನಪ್ಪಿದ್ದಾರೆ.