ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ  ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರ್ ನಲ್ಲಿ ಸಮಯ ನಿಗದಿ ಪಡಿಸಲಾಗುವುದು ಎಂದು ಹೇಳಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಹಲವು ಬದಲಾವಣೆಗಳಿಗೆ ಸೂಚಿಸಲಾಗಿದೆ. 400ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ – ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. 

ಮುಂದಿನ ಜೂನ್ ಸಮಯಕ್ಕೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿ

ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು…

ಬೆಂಗಳೂರಿನ ಹೊಂಗಸಂದ್ರದಲ್ಲಿ ಮತ್ತೆ ಐವರಲ್ಲಿ ಕಂಡು ಬಂದ ಸೋಂಕು!

ಇಲ್ಲಿಯ ಹೊಂಗಸಂದ್ರದಲ್ಲಿನ ಮತ್ತೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಿಹಾರಿ ಕೂಲಿ ಕಾರ್ಮಿಕನಿಂದ 29 ಜನರಿಗೆ ಸೋಂಕು ಹರಡಿತ್ತು. ಕೆಲವು ದಿನಗಳ ನಂತರ ಪ್ರಕರಣಗಳು ಪತ್ತೆಯಾಗಿರಲಿಲ್ಲ.

ಮಸ್ಕಿ: ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.