ಕಾಫಿ ನಾಡಿನಲ್ಲಿ ಸದ್ಯದಲ್ಲಿಯೇ ಶುರುವಾಗಲಿದೆ ವೈದ್ಯಕೀಯ ಕಾಲೇಜು!

ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ  ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರ್ ನಲ್ಲಿ ಸಮಯ ನಿಗದಿ ಪಡಿಸಲಾಗುವುದು ಎಂದು ಹೇಳಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಹಲವು ಬದಲಾವಣೆಗಳಿಗೆ ಸೂಚಿಸಲಾಗಿದೆ. 400ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ – ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. 

ಮುಂದಿನ ಜೂನ್ ಸಮಯಕ್ಕೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. 

Exit mobile version