ಬೆಂಗಳೂರು : ಕಾಫಿ ನಾಡಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ  ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರ್ ನಲ್ಲಿ ಸಮಯ ನಿಗದಿ ಪಡಿಸಲಾಗುವುದು ಎಂದು ಹೇಳಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಹಲವು ಬದಲಾವಣೆಗಳಿಗೆ ಸೂಚಿಸಲಾಗಿದೆ. 400ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ – ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. 

ಮುಂದಿನ ಜೂನ್ ಸಮಯಕ್ಕೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ದೇವಿ ಪುರಾಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ

ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ನಾಳೆಯಿಂದ ರಾಜ್ಯದಲ್ಲಿ ಏನಿರುತ್ತೆ?-ಏನಿರಲ್ಲ?: ಲಾಕ್ ಡೌನ್ ಸಡಿಲಿಕೆ ನಿಯಮಗಳೇನು?

ಈಗಾಗಲೇ ಕೇಂದ್ರ ಸರ್ಕಾರ ಲಾಕ್ ಡೌನ್ 4 ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೆ ಇಂದು ಸಂಪುಟ ಸಭೆ ಕರೆದ ಸಿಎಂ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದಾಗಿ ನಾಳೆಯಿಂದ ರಾಜ್ಯದಲ್ಲಿ ಏನೆಲ್ಲ ಆರಂಭವಾಗಲಿವೆ..?