ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.
ಬಿಜೆಪಿಯ ಮುನಿರತ್ನ, ಕಾಂಗ್ರೆಸ್ ನ ಕುಸುಮಾ ಹಾಗೂ ಜೆಡಿಎಸ್ ನ ಕೃಷ್ಣಮೂರ್ತಿ ಅವರ ನಡುವೆ ರಾಜರಾಜೇಸ್ವರಿ ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಏಣಿಕೆ ನಡೆಯಲಿದೆ. ನಾಳೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೂ ಕ್ಷೇತ್ರ ವ್ಯಾಪಿ ನಿಷೇಧಾಜ್ಞೆ ಹೇರಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.
ರಾಜರಾಜೇಶ್ವರಿ ನಗರದಲ್ಲಿ 16 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಕ್ಷೇತ್ರದಲ್ಲಿ 412 ಅಂಚೆ ಹಾಗೂ 04 ಇಟಿಪಿಬಿಎಸ್ ಸೇರಿದಂತೆ 2,09,828 ಮತ ಚಲಾವಣೆ ಆಗಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಹಾಗೂ ಇಟಿಪಿಬಿಎಸ್ ಮತಗಳನ್ನ ಎಣಿಕೆ ಹಾಕಲಾಗುವುದು. ಇವಿಎಂ ಮತ ಎಣಿಕೆ ಬೆಳಗ್ಗೆ 8.30 ಕ್ಕೆ ಪ್ರಾರಂಭವಾಗಲಿದೆ. ಒಟ್ಟು 25 ಸುತ್ತಿನ ಮತ ಎಣಿಕೆ ನಡೆಯಲಿದೆ.
