ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

ಬಿಜೆಪಿಯ ಮುನಿರತ್ನ, ಕಾಂಗ್ರೆಸ್‍ ನ ಕುಸುಮಾ ಹಾಗೂ ಜೆಡಿಎಸ್‍ ನ ಕೃಷ್ಣಮೂರ್ತಿ ಅವರ ನಡುವೆ ರಾಜರಾಜೇಸ್ವರಿ ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಏಣಿಕೆ ನಡೆಯಲಿದೆ. ನಾಳೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೂ ಕ್ಷೇತ್ರ ವ್ಯಾಪಿ ನಿಷೇಧಾಜ್ಞೆ ಹೇರಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.

ರಾಜರಾಜೇಶ್ವರಿ ನಗರದಲ್ಲಿ 16 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಕ್ಷೇತ್ರದಲ್ಲಿ 412 ಅಂಚೆ ಹಾಗೂ 04 ಇಟಿಪಿಬಿಎಸ್ ಸೇರಿದಂತೆ 2,09,828 ಮತ ಚಲಾವಣೆ ಆಗಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಹಾಗೂ ಇಟಿಪಿಬಿಎಸ್ ಮತಗಳನ್ನ ಎಣಿಕೆ ಹಾಕಲಾಗುವುದು. ಇವಿಎಂ ಮತ ಎಣಿಕೆ ಬೆಳಗ್ಗೆ 8.30 ಕ್ಕೆ ಪ್ರಾರಂಭವಾಗಲಿದೆ. ಒಟ್ಟು 25 ಸುತ್ತಿನ ಮತ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಜನರಿಗೆ ಕೊಂಚ ನೆಮ್ಮದಿ

ಜಿಲ್ಲೆಯ 3 ಜನ ಕೊವಿಡ್-19 ಸೋಂಕಿತರು 42 ವರ್ಷದ ಪುರುಷ ಪಿ-370, 24 ವರ್ಷದ ಪುರುಷ ಪಿ-396 ಹಾಗೂ 75 ವರ್ಷದ ಪಿ-514 ಸಂಪೂರ್ಣ ಗುಣಮುಖರಾಗಿ ನಿಗದಿತ ಆಯುಷ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಮ್ಸ್ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಲಕ್ಕುಂಡಿಯಲ್ಲಿ ಗರ್ಭಿಣಿಯರ ಆಹಾರ ಮನೆಗೆ ಒಯ್ಯುವಾಗ ಸಿಕ್ಕಿಬಿದ್ದ ಅಂಗನವಾಡಿ ಟೀಚರ್

ಗರ್ಭಿಣಿಯರಿಗೆ ಪೂರೈಸಿದ ಆಹಾರ ಪದಾರ್ಥಗಳನ್ನು ಮನೆಗೆ ಒಯ್ಯುವಾಗ ಅಂಗನವಾಡಿ ಶಿಕ್ಷಕಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ.