ಹೈದರಾಬಾದ್ : ನಟ ಚಿರಂಜೀವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಆಚಾರ್ಯ ಸಿನಿಮಾ ಚಿತ್ರೀಕರಣ ಪ್ರಾರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ, ಈ ಸಂದರ್ಭದಲ್ಲಿ ನನಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿದೆ. ಆದರೆ, ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಿಲ್ಲ. ಈ ನಿಟ್ಟಿನಲ್ಲಿ ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಕೊರೊನಾ ಬಂದ ಹಿನ್ನೆಲೆಯಲ್ಲಿ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಗೆ ಒಳಗಾಗಬೇಕು. ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ನಿಮಗೆ ಶೀಘ್ರವೇ ತಿಳಿಸುತ್ತೇನೆ ಎಂದು ಬರೆದಿದ್ದಾರೆ.
ಆಚಾರ್ಯ ಸಿನಿಮಾ ಶೂಟಿಂಗ್ ಇಂದಿನಿಂದ ಆರಂಭವಾಗಿದ್ದು, ಚಿರಂಜೀವಿ ಹಾಗೂ ಕೊರಟಾಲ ಶಿವ ತಮ್ಮ ಭಾಗದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಕೊರೊನಾ ನಿಯಮದಂತೆ ಚಿತ್ರ ತಂಡದ ಎಲ್ಲ ಸದಸ್ಯರಿಗೆ ಪರೀಕ್ಷೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಚಿರಂಜೀವಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

ಲಾಕ್ ಡೌನ್ ನಿಂದಾಗಿ ಆಚಾರ್ಯ ಸಿನಿಮಾ ಚಿತ್ರೀಕರಣ ಹಲವು ದಿನಗಳಿಂದ ಸ್ಥಗಿತವಾಗಿತ್ತು. ಸದ್ಯ ಮತ್ತೆ ಆರಂಭವಾಗಿದೆ. ಚಿತ್ರೀಕರಣವನ್ನು ಹೈದರಾಬಾದ್ ನಲ್ಲಿ ನಡೆಸಲು ತಯಾರಿ ನಡೆದಿತ್ತು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಬಗ್ಗೆ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಬಗ್ಗೆ ಸರ್ಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗೆ ಕೆಲವೊಂದು ಅಂಶಗಳನ್ನು ಸೇರ್ಪಡಿಸಿ ರಾಜ್ಯ…

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.

ರಾಜ್ಯದಲ್ಲಿ ಇಂದು ಇಳಿಕೆ ಕಂಡ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.