ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಡ್ರಗ್ಸ್ ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ. ಮಾಧ್ಯಮಗಳ ಮೂಲಕವೇ ನನಗೆ ಈ ವಿಷಯ ಗೊತ್ತಾಗಿದೆ. ನನ್ನ ಮಗ ರಾಣೇಬೆನ್ನೂರಿನ ಕಾಲೇಜಿನಲ್ಲಿ ಓದುತ್ತಿದ್ದಾನೆ. ಈ ವರ್ಷ ಕಾಲೇಜಿಗೆ ಹೋಗಿಲ್ಲ. ವಿಚಾರಣೆ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಇಂದು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಬಂಧನದ ಕುರಿತು ತಿಳಿದು ಬಂದಿದೆ.

ನ. 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಮತ್ತು ಸುನಿಶ್ ತಲೆ ಮರೆಸಿಕೊಂಡಿದ್ದಾರೆ. ಈ ಇಬ್ಬರಿಗೆ ದರ್ಶನ್, ಗೋವಾದಲ್ಲಿ ಆಶ್ರಯ ನೀಡಿದ ಆರೋಪ ಕೇಳಿ ಬಂದಿದೆ. ಅಲ್ಲದೇ, ದರ್ಶನ್ ಕೂಡ ಆರೋಪಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ!

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ಕೊರೊನಾಕ್ಕೆ ಅಕ್ಷರಸಃ ನಲುಗುತ್ತಿದೆ ಬೆಂಗಳೂರು!

ನವದೆಹಲಿ : ಬೆಂಗಳೂರು ನಗರದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಬೆಂಗಳೂರಿಗರಲ್ಲಿ ಆತಂಕ ಮನೆ ಮಾಡುತ್ತಿದೆ.