ಧಾರವಾಡ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಬಿ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ. 23ರ ವರೆಗೂ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ನಗರದ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ನ. 23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು, ವಿನಯ್ ಕುಲಕರ್ಣಿ ಅವರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ವಾದ – ವಿವಾದ ಆಲಿಸಿದ ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ, ಸುಳ್ಳು ದಾಖಲೆ ಸೃಷ್ಟಿ, ಪೊಲೀಸ್ ಇಲಾಖೆ ಮೇಲೆ ಒತ್ತಡ, ಹಂತಕರಿಗೆ ಆಶ್ರಯ ಸೇರಿದಂತೆ ಹಲವು ಪ್ರಶ್ನೆಗಳನ್ನು ಸಿಬಿಐ, ವಿನಯ್ ಕುಲಕರ್ಣಿ ಅವರಿಗೆ ಕೇಳಿದೆ ಎಂದು ತಿಳಿದು ಬಂದಿದೆ.

ಮಾಜಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ, ಮಾಜಿ ಸಚಿವರ ಸೋದರ ಮಾವ ಚಂದ್ರಶೇಖರ ಇಂಡಿ, ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಅವರನ್ನು ಕೂಡ ಸಿಬಿಐ ವಿನಯ್ ಕುಲಕರ್ಣಿ ಸಮ್ಮುಖದಲ್ಲಿಯೇ ವಿಚಾರಣೆಗೆ ಒಳಪಡಿಸಿತ್ತು.

Leave a Reply

Your email address will not be published. Required fields are marked *

You May Also Like

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…