ಮೈಸೂರು : ಗ್ರಾಮದೊಳಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಜನರನ್ನು ಪೊಲೀಸವು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಪಿರಿಯಾಪಟ್ಟಣ ತಾಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಎಂ. ಮಧುಗೌಡ ಹಾಗೂ ಆತನ ಸಹಚರರಿಂದ ಈ ಕೃತ್ಯ ನಡೆದಿದೆ. ಗ್ರಾಮದಲ್ಲಿನ ಗುರುಲಿಂಗಪ್ಪ ಮತ್ತು ಚನ್ನಬಸವಪ್ಪ ಎಂಬುವವರ ಕುಟುಂಬದ ನಡುವೆ ಸಣ್ಣ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಕುರಿತು ಸಾಕಷ್ಟು ಪಂಚಾಯ್ತಿ ನಡೆಸಿ, ಸಮಸ್ಯೆ ಬಗೆಹರಿಸಿದರೂ ಸಮಸ್ಯೆ ಇತ್ಯರ್ಥವಾಗಿರಲಿಲ್ಲ. ಹೀಗಾಗಿ ಇದು ನ್ಯಾಯಾಲಯದ ಮೆಟ್ಟಿಲು ಏರಿತ್ತು.

ಚನ್ನಬಸವಪ್ಪನ ಮೊಮ್ಮಗಳ ಪತಿ ಸುನಿಲ್ ಕುಮಾರ್ ಎಂಬುವವರು ಮಧುಗೌಡ ಮತ್ತು ಸ್ನೇಹಿತರನ್ನು ಗ್ರಾಮಕ್ಕೆ ಕರೆತಂದು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆ ಮಾಡಿಸಿದ್ದಾರೆ. ಇದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಲ್ಲಹಳ್ಳಿ ಗ್ರಾಮದ ಬಿ.ಎಂ. ಚನ್ನಬಸಪ್ಪ, ಈತನ ಮೊಮ್ಮಗಳ ಪತಿ ಬಿ.ಎನ್ ಸುನಿಲ್ಕು್ಮಾರ್, ಬೆಂಗಳೂರಿನ ಎಂ. ಮಧು ಗೌಡ, ಯಾಸೀನ್, ಎಂ. ಪುನೀತ್ ಕುಮಾರ್, ಸಚಿನ್, ಬಿ.ಡಿ ಪುನೀತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 11 ಸಜೀವ ಗುಂಡು 2 ಖಾಲಿ ಗುಂಡು 2 ಫಾರ್ಚೂನರ್ ಕಾರು, ಮಹೇಂದ್ರ ಸ್ಕಾರ್ಪಿಯೋಗಳನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.