ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.
ರಾಜರಾಜೇಶ್ವರಿ ನಗರದಲ್ಲಿ ನಡೆದ ಪ್ರಚಾರ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಲೆಯೇ ಇಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.
ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಕಾಂಗ್ರೆಸ್ ನ ಕಾಮಿಡಿಯನ್ ಸಿದ್ದರಾಮಯ್ಯ ಅವರು ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. ಮತ ಎಣಿಕೆ ಮುಕ್ತಾಯವಾಗಿದ್ದು, ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಕಳೆದ ಚುನಾವಣೆಗಿಂತ ಎರಡು ಪಟ್ಟು ಮತ ಪಡೆದು ಗೆಲುವು ಕಂಡಿದ್ದಾರೆ.
ಮುನಿರತ್ನ 1,25,734 ಮತಗಳನ್ನು ಪಡೆದರೆ ಕುಸುಮಾ 67,798 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ನಿಂಿದ ಸ್ಪರ್ಧಿಸಿದ್ದ ಕೇಶವಮೂರ್ತಿ 10,251 ಮತಗಳನ್ನು ಪಡೆದಿದ್ದಾರೆ.