ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿಯೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಅಲ್ಲದೇ, ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಲೀಡ್ ನಲ್ಲಿ ಇದ್ದಾರೆ.

ಮಧ್ಯ ಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈ ಪೈಕಿ 19 ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 8, ಬಿಎಸ್‌ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಗುಜರಾತ್‌ ನಲ್ಲಿ 8 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 8 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶದ 7 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ 5 ರಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಬಿಎಸ್ ಪಿ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎರಡೂರಲ್ಲಿಯೂ ಬಿಜೆಪಿ ಮುನ್ನಡೆಯಲ್ಲಿದೆ. ಮಣಿಪುರದಲ್ಲಿ 5 ಕ್ಷೇತ್ರಗಳ ಪೈಕಿ ಈಗಾಗಲೇ 1 ಕ್ಷೇತ್ರ ಬಿಜೆಪಿ ಗೆದ್ದುಕೊಂಡಿದ್ದು, 3ರಲ್ಲಿ ಮುನ್ನಡೆಯಲ್ಲಿದೆ. ಒಬ್ಬರು ಪಕ್ಷೇತರ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ – ಪ್ರತಾಪ್ ಸಿಂಹ!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಜೊತೆ ಕೈ ಜೋಡಿಸಿರುವ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಹೆಚ್ಚು ಮದ್ಯ ಕುಡಿದಿದ್ದಾನೆ ಎಂಬ ಕಾರಣಕ್ಕೆ ಕೊಲೆ!

ತಮಗಿಂತ ಹೆಚ್ಚು ಮದ್ಯ ಸೇವನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಇಲ್ಲಿಯ ಆರ್.ಟಿ. ನಗರದಲ್ಲಿ ನಡೆದಿದೆ.

ನಗರ ಸಭೆ ಚುನಾವಣೆ: 29ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 29  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 29ನೇ  ವಾರ್ಡನಲ್ಲಿ…

ಕೊರೊನಾ ಸಂಕಷ್ಟ – ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ…