ಬೆಂಗಳೂರು: ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ‌. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಕಡ್ಡಾಯವಾಗಿ ಪಾಲಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳು

1, ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿ ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು.
2, ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19(RT-PCR) ಪರೀಕ್ಷೆಯನ್ನು ಮಾಡಿಸಿಕೊಂಡು, ಟೆಸ್ಟ್ ರಿಪೋರ್ಟ್ ನೆಗೆಟಿವ್ ಇದ್ದಲ್ಲಿ ಮಾತ್ರ ವಿಶ್ವವಿದ್ಯಾಲಯ, ಕಾಲೇಜುಗಳಿಗೆ ಹಾಜರಾಗುವುದು.
3, ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳೊಂದಿಗೆ ಮ್ಯಾಪಿಂಗ್ ಮಾಡಿಕೊಳ್ಳುವುದು.
4, ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ, ತನ್ನ ಸಹಪಾಠಿಗಳಲ್ಲೇನಾದರೂ ಕೋವಿಡ್ ಗೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದಲ್ಲಿ, ಅದನ್ನು ಕೋವಿಡ್ ಕಾರ್ಯಪಡೆ, ಸೆಲ್ ಗಮನಕ್ಕೆ ತರುವಂತೆ ಸೂಚಿಸುವುದು.
5, ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತಹ ತಂದು, ಅವರೇ ಉಪಯೋಗಿಸುವುದು.
6, ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್ ಶೀಲ್ಡ್ ಅನ್ನು ಧರಿಸುವುದು.
7, ಕಾಲೇಜುಗಳಲ್ಲಿ ಲೈಬ್ರರಿ ಮತ್ತು ಕ್ಯಾಂಟೀನ್ ಗಳನ್ನು ತೆರೆಯುವಂತಿಲ್ಲ.
8, ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎನ್.ಸಿ.ಸಿ ಹಾಗೂ ಎನ್ಎಸ್ಎಸ್ ಚಟುವಟಿಕೆಗಳನ್ನು ಪ್ರಾರಂಭಿಸುವಂತಿಲ್ಲ.

ಪ್ರವೇಶ ಹಾಗೂ ನಿರ್ಗಮನ ಕೇಂದ್ರಗಳ ಸುರಕ್ಷತಾ ಕ್ರಮಗಳು

1, ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತು ಸ್ಯಾನಿಟೈಸರ್ಗಳ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು.
2, ಪ್ರವೇಶ, ನಿರ್ಗಮನ ಸ್ಥಳಗಳಲ್ಲಿ ಜನಸಂದಣಿಯನ್ನು ತಪ್ಪಿಸಬೇಕು.
3, ವಿವಿಧ ಕೋರ್ಸುಗಳಿಗೆ ಸೀಮಿತ ವಿದ್ಯಾರ್ಥಿಗಳ ಸಂಖ್ಯೆಯನ್ನು ನಿಗಧಿಗೊಳಿಸಿ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನದ ಸಮಯಗಳನ್ನು ಅನುಸರಿಸಬೇಕು.
3, ಆವರಣದ ಒಳಗೆ ಮತ್ತು ಹೊರಗೆ ಕ್ಯೂ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು, ನೆಲದ ಮೇಲೆ 6 ಅಡಿಗಳ ಅಂತವಿರುವ ನಿರ್ಧಿಷ್ಟ ಗುರುತುಗಳನ್ನು ಮಾಡುವುದು. ಅದನ್ನು ಪಾಲಿಸುವುದು.
4, ವಿದ್ಯಾರ್ಥಿಗಳ ಪ್ರವೇಶ ಮತ್ತು ನಿರ್ಗಮನದ ಮೇಲ್ವಿಚಾರಣೆಯನ್ನು ಮಾಡಬೇಕು.
5, ವಿದ್ಯಾರ್ಥಿ, ಬೋಧಕ, ಬೋಧಕೇತರ ಸಿಬ್ಬಂದಿಯ ಥರ್ಮಲ್ ತಪಾಸಣೆ ಮುಖಗವಸು, ಮಾಸ್ಕ್ ಧರಿಸುವುದು.
6, ಕೈಗಳನ್ನು ಶುದ್ದಿಗೊಳಿಸುವುದನ್ನು ಎಲ್ಲಾ ಪ್ರವೇಶದಲ್ಲಿ ಖಚಿತಪಡಿಸಿಕೊಳ್ಳುವುದು.
7, ಜ್ವರ, ಕೆಮ್ಮು, ಉಸಿರಾಟದ ತೊಂದರೆಯ ಲಕ್ಷಣಗಳು ಹೊಂದಿರುವವರು ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸುವುದು.

Leave a Reply

Your email address will not be published. Required fields are marked *

You May Also Like

ಸೋಂಕಿನಿಂದ ಗುಣಮುಖರಾದವರಲ್ಲಿಯೂ ಕಂಡು ಬರುತ್ತಿದೆ ಮಹಾಮಾರಿ!

ಬೆಂಗಳೂರು : ಮಹಾಮಾರಿ ಸೋಂಕಿಗೆ ಬಲಿಯಾಗಿ ಗುಣಮುಖರಾದವರಲ್ಲಿ ಅನಾರೋಗ್ಯ ಕಂಡು ಬರುತ್ತಿದೆ. ಈ ರೀತಿಯ ಬಹುತೇಕ ಜನರಲ್ಲಿ ಕಂಡು ಬಂದಿರುವುದು ಬೆಳಕಿಗೆ ಬರುತ್ತಿದೆ. ಅಲ್ಲದೇ, ಸದ್ಯ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ.

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.

ಲಾಕ್‌ಡೌನ್ ನಿರ್ಬಂಧಗಳಲ್ಲಿ ಬದಲಾವಣೆ : 19 ಜಿಲ್ಲೆಗಳಲ್ಲಿ ಸೆಮಿ ಲಾಕ್‌ಡೌನ್ ಜಾರಿ

ರಾಜ್ಯದ ಕೆಲ ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂ.10 ರಂದು ಸಿಎಂ ಯಡಿಯೂರಪ್ಪ ಲಾಕ್‌ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ.

ಈದ್ ಮಿಲಾದ್, ದಸರಾ ಆಚರಣೆ : ಶಾಂತಿ ಪಾಲನೆ‌ ಸಭೆ

ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.