ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಜೊತೆ ಕೈ ಜೋಡಿಸಿರುವ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ನಮ್ಮ ಪಕ್ಷದ ಬಗ್ಗೆ ನಮಗಿಂತ ಚೆನ್ನಾಗಿ ಸಿದ್ದರಾಮಯ್ಯ ಅವರಿಗೆ ತಿಳಿಯುತ್ತಿದೆ. ಅವರು ನಮ್ಮ ನಾಯಕರ ಸಂಪರ್ಕ ಸಾಧಿಸಿರಬಹುದು. ಹೀಗಾಗಿ ನಮ್ಮ ಪಕ್ಷದ ಬಗ್ಗೆಯೇ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ನ್ಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶಿರಾದಲ್ಲಿ 70 ವರ್ಷಗಳಿಂದ ಬಿಜೆಪಿ ಗೆದ್ದಿರಲಿಲ್ಲ. ಸದ್ಯ ಇದಕ್ಕೆ ಅವಕಾಶ ಸಿಕ್ಕಿದೆ. ಉಪಚುನಾವಣೆ ಆಡಳಿತ ಪಕ್ಷದ ಪರವಾಗಿರುತ್ತವೆ. ಉಪಚುನಾವಣೆಯಲ್ಲಿ ಹಣ, ಅಧಿಕಾರ ದುರುಪಯೋಗವಾಗುತ್ತದೆ ಎಂದು ಆರೋಪಿಸಲಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಉಪಚುನಾವಣೆಯಲ್ಲಿ ಮಾಡಿದ್ದೇನು? ನಂಜನಗೂಡು, ಚಾಮರಾಜನಗರ ಉಪಚುನಾವಣೆ ಹೇಗೆ ಗೆದ್ದರು ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಹಾಳಾದರೂ ಸರಿ ಡಿ.ಕೆ.ಶಿವಕುಮಾರ್ ಗೆ ಯಾವುದೇ ಸ್ಥಾನ ಸಿಗಬಾರದು. ಇದು ಸಿದ್ದರಾಮಯ್ಯ ಅವರ ಸಿದ್ಧಾಂತ ಹಾಗೂ ಉದ್ಧೇಶವಾಗಿದೆ. ಹೀಗಾಗಿ ಪ್ರತಿಯೊಂದು ಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋಲನ್ನು ಸಿದ್ದರಾಮಯ್ಯ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ…