ನವದೆಹಲಿ: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಯಾಗಿ ಜಯ ಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ರಾಜ್ಯದಲ್ಲಿ ಶಿರಾ ಮತ್ತು ರಾಜ ರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಬಿಎಸ್ವೈರ ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ: ದೃಢೀಕರಿಸುತ್ತದೆ. ಅಲ್ಲದೆ ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಮೋದಿ ಬರೆದುಕೊಂಡಿದ್ದಾರೆ.

ಅಲ್ಲದೆ, ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ, ಕನ್ನಡದಲ್ಲಿಯೇ ಧನ್ಯವಾದ ಅರ್ಪಿಸಿದ್ದರು. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮುನಿರತ್ನ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಅವರು 1,25,990 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸುಮಾ ಎಚ್ ಅವರು 67,877 ಮತಗಳನ್ನು ಗಳಿಸಿದ್ದರು. ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸುವುದರ ಮೂಲಕ ಇತಿಹಾಸ ನಿರ್ಮಿಸಿದೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ರಾಜೇಶ್ ಗೌಡ ಅವರು 76,564 ಮತಗಳನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರ- ನಿನ್ನೆ ಒಂದೇ ದಿನ ಎಷ್ಟು ಕೇಸ್ ಗಳು ಗೊತ್ತಾ?

ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ…

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.