ಗದಗ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ನನ್ನು ಕೊಲೆ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಗಂಗಾಪೂರದ ವಿಜಯ ನಗರ ಸಕ್ಕರೆ ಕಾರ್ಖಾನೆ ಹಿಂಬದಿಯ ರಸಗೊಬ್ಬರ ಗೊದಾಮಿನಲ್ಲಿ ಘಟನೆ ನಡೆದಿದ್ದು, ಫಕ್ಕಿರೇಶ್ ತಳವಾರ (32) ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಘಟನೆ ಮಾತ್ರ ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾಸನಾಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಫಕ್ಕೀರೇಶ್ ಪತ್ನಿ ದೂರು ಹಿನ್ನೆಲೆ ಮುಂಡರಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
