ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಗದಗ: ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣ್ಣದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸಲಾಗುತ್ತಿತ್ತು. 50 ಕೆಜಿಯ ,600 ಪಾಕೆಟ್, ಸೇರಿದಂತೆ ಲಾರಿ ವಶಕ್ಕೆ ಪಡೆಯಲಾಗಿದೆ. ಅಂದಾಜು 5 ಲಕ್ಷ ಹೆಚ್ಚು ಮೌಲ್ಯದ ಅನ್ನ ಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದ್ದು, ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆಹಾರ ಇಲಾಖೆ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

Exit mobile version