ಹಾಸನ: ಕೋವಿಡ್ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ತಿಳಿಸಿದರು.

ಅವರು ಈ ಕುರಿತು ಹಾಸನದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿ, ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಘೋಷಿಸಲು ಉಚ್ಛ ನ್ಯಾಯಾಲಯ ಆದೇಶಿಸಿದೆ.

ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿ ಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ 2 ಹಂತಗಳಲ್ಲಿ ಚುನಾವಣೆ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಚುನಾವಣೆ ಸಂದರ್ಭದಲ್ಲಿ ಹೆಚ್ಚಿನ ಜನಸಂದಣಿ ಆಗುವುದನ್ನು ತಪ್ಪಿಸಲು 1000 ಅಧಿಕ ಮತದಾರರನ್ನು ಒಳಗೊಂಡ ಮತ ಗಟ್ಟೆಗೆ ಹೆಚ್ಚುವರಿ ಕೊಠಡಿಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲು ತಿಳಿಸಿದರು. ಮತಗಟ್ಟೆಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡುವುದರ ಜೊತೆಗೆ ಮತದಾರರಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಆದರೆ ಯಾವುದೇ ಕಾರಣಕ್ಕೂ ಮತದಾನದ ಸಂಖ್ಯೆಯಲ್ಲಿ ಇಳಿಕೆಯಾಗಬಾರದು ಎಂದು ಹೇಳಿದರು.

ಮಾಧ್ಯಮದವರು ಹಾಗೂ ಸಂಘ ಸಂಸ್ಥೆಗಳು ಚುನಾವಣೆ ಸಂದರ್ಭದಲ್ಲಿ ನಿಸ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿಬೇಕು. ಅವು ಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುವುದರ ಜೊತೆಗೆ, ಚುನಾವಣಾ ಆಯೋಗಕ್ಕೆ ಇದರ ಬಗ್ಗೆ ವರದಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳು ಮತಗಟ್ಟೆಗಳ ದುರಸ್ಥಿ ಕಾರ್ಯವನ್ನು ಮಾಡಿಸಬೇಕು. ಜೊತೆಗೆ ಮತಗಟ್ಟೆಗಳಲ್ಲಿ ಅಂತರ್ಜಾಲ ಸೌಲಭ್ಯ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.

ಮತಗಟ್ಟೆಗಳ ಸ್ಯಾನಿಟೈಸ್

ಮತಗಟ್ಟೆಗಳನ್ನು ಸ್ಯಾನಿಟೈಸ್ ಮಾಡಿಸುವುದು, ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಹಾಗೂ ಮತದಾರರಿಗೆ ಸೂಕ್ತ ಪ್ರಚಾರ ನೀಡುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಆಯುಕ್ತರು ತಿಳಿಸಿದರು.

ಅಗತ್ಯ ಅನುದಾನ

ಚುನಾವಣೆಗೆ ಅಗತ್ಯ ಅನುದಾನವನ್ನು ಒದಗಿಸಲಾಗುತ್ತಿದ್ದು, ಅದನ್ನು ಮಿತವಾಗಿ ವಿನಿಯೋಗ ಮಾಡಿ, ವಿನಿಯೊಗ ಮಾಡಿದ ಅನು ದಾನದ ವಿವರವನ್ನು ಕಡ್ಡಾಯವಾಗಿ ಆಯೋಗಕ್ಕೆ ನಿಗದಿತ ಸಮಯದೊಳಗೆ ನೀಡಬೇಕು. ಚುನಾವಣೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯಾವುದೇ ಅಧಿಕಾರಿ ರಜೆ ಅಥವಾ ಕೇಂದ್ರ ಸ್ಥಾನ ಬಿಟ್ಟು ಹೋಗುವ ಹಾಗಿಲ್ಲ ಎಂದು ಚುನಾವಣಾ ಆಯೋಗದ ಆಯುಕ್ತರು ತಿಳಿಸಿದರು.

ಸೋಂಕಿತರಿಗೆ ಮತದಾನದ ಬಗ್ಗೆ ಚಿಂತನೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ಉಪ ವಿಭಾಗಾಧಿಕಾರಿ ಮಟ್ಟದಲ್ಲಿ ಆಯ್ಕೆ ಮಾಡಿ ಅವರಿಗೆ ಸೂಕ್ತ ತರಬೇತಿ ನೀಡಬೇಕು. ಹಾಗೂ ಚುನಾವಣೆ ಸಂದರ್ಭದಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಯು ಮತ ಚಲಾವಣೆಯನ್ನು ಅಂಚೆ ಮತ ಪತ್ರದ ಮೂಲಕ ಮಾಡುವುದೋ ಅಥವಾ ಪಿ.ಪಿ.ಇ ಕಿಟ್ ಧರಿಸಿ ತಾನೇ ಖುದ್ದಾಗಿ ಮತ ಚಲಾವಣೆ ಮಾಡುವುದೋ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ದೇಶನ ನೀಡಲಾಗುವುದು. ಡಾ.ಬಿ.ಬಸವರಾಜು, ಆಯುಕ್ತರು, ರಾಜ್ಯ ಚುನಾವಣಾ ಆಯೋಗ

ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ತಹಶೀಲ್ದಾರ್ ಹೆಚ್.ಟಿ ಪದ್ಮನಾಭಶಾಸ್ತ್ರಿ ಹಾಗೂ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.

ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು.