ಬೆಂಗಳೂರು: ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿ ಈ ಆದೇಶ ನೀಡಿದೆ.

ಇದರಿಂದ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಅಧಿಸೂಚನೆಗೆ ತಡೆಯಾಜ್ಞೆ ನೀಡಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅ.22ರಂದು ಹಿಂಪಡೆದಿದ್ದ ಏಕಸದಸ್ಯ ಪೀಠ, ನ.10ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಇದೀಗ 4 ವಾರಗಳಲ್ಲಿ ಮರು ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶಿಸಿತು. ಇದೇ ವೇಳೆ ಸರ್ಕಾರದ ಪರ ವಕೀಲರು ಈ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಿದ್ದು, ಅದಕ್ಕಾಗಿ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ಹೈಕೋರ್ಟ್​, ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಆದೇಶಕ್ಕೆ 10 ದಿನಗಳವರೆಗೆ ತಡೆಯಾಜ್ಞೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 82 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.