ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಗೆ ನೂತನ 16 ಸಾವಿರ ಪೊಲೀಸ್‌ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಏರ್ಪಡಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್‌ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈಗಾಗಲೇ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಹೊಸದಾಗಿ 16 ಸಾವಿರ ಸಿಬ್ಬಂದಿಯನ್ನು ನೇಮಿಸಿ ಇಲಾಖೆಯನ್ನು ಸಧೃಡಗೊಳಿಸಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರದಿಂದ 13,341 ಉದ್ಯೋಗ ಸೃಷ್ಠಿ

ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲು ಮುಂದಾಗಿದ್ದು, ಇದರಿಂದ ಭಾರೀ ಪ್ರಮಾಣದ ದ್ಯೋಗ ಸೃಷ್ಟಿಯಾಗುವ ಸಾದ್ಯತೆ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ ಹೂಡಿಕೆಯ 5 ಪ್ರಸ್ತಾವನೆಗಳಿಗೆ ಅನುಮತಿ ದೊರೆತಿದ್ದು, ಇದರಿಂದ ಒಟ್ಟು 13,341 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಮೆಕ್ಕೆಜೋಳ ರೈತರಿಗೆ ಪರಿಹಾರ: ಇದರಲ್ಲಿ ಸಂಶಯ ಬೇಡ

ಕೊಪ್ಪಳ: ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ…

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಗಜೇಂದ್ರಗಡದಲ್ಲಿ ವಾರದ ಸಂತೆ ರದ್ದು!

ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.