ರೋಣ: ಇದೇ 26 ಮತ್ತು 27 ರಂದು ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ರೈತರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯ ಖಂಡಿಸಿ ಹಮ್ಮಿಕೊಂಡ ಪ್ರತಿಭಟನೆ ಹಿನ್ನೆಲೆ ರೈತರಿಗೆ ಜಾಗೃತಿ ಮೂಡಿಸಲಾಯಿತು. ಸವಡಿ ಗ್ರಾಮದ ಸಂಗಮೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥ ಹಮ್ಮಿಕೊಂಡು ಗ್ರಾಮದಲ್ಲಿ ಮನನೆಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಲಾಯಿತು.

ಎಪಿಎಂಸಿ, ಭೂಸುಧಾರಣೆ, ವಿದ್ಯುತ್ ಕಾಯ್ದೆ ಸೇರಿದಂತೆ ಹಲವು ಕಾಯ್ದೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದ್ದು ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ನ.26 ಮತ್ತು 27 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೋರಾಟಕ್ಕೆ ಬೆಂಬಲ ಸೂಚಿಸಲು ಮನವಿ ಮಾಡಿಕೊಳ್ಳಲಾಯಿತು. ಈ ವೇಳೆ ಸರ್ಕಾರದ ರೈತ ವಿರೋಧಿ ನಡೆ ಬಗ್ಗೆ ರೈತಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ನವ್ಹಂಬರ್ 26, 27 ರಂದು ನಡೆಯಲಿರು ಪ್ರತಿಭಟನೆಗೆ ಬೆಂಬಲ ಸೂಚಿಸಲು ಮನವಿ ಮಾಡಿದರು.

ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಮುತ್ತನಗೌಡ ಚೇಗರಡ್ಡಿ, ಮೇಘರಾಜ್ ಭಾವಿ, ವೀರೇಶ ಚಿತ್ರಗಾರ, ಉಮೇಶ್ ಸಾಲಿಮಠ, ಕೊಟ್ರೇಶ್, ಬಸಣ್ಣ ಗೆದಿಗೇರಿ ಸೇರಿ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಕಾಲೇಜ್ ಆರಂಭಕ್ಕೆ ಸರ್ಕಾರದ ಮಾರ್ಗಸೂಚಿ

ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ‌. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ಆಲಮಟ್ಟಿ: 15 ರಂದು ಹಳಕಟ್ಟಿ ಶಾಲೆಯ 64 ನೇ ವಾಷಿ೯ಕ ಸ್ನೇಹ ಸಮ್ಮೇಳನ

ಗುಲಾಬಚಂದ ಆರ್. ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ರಾವಬಹದ್ದೂರ ಡಾ. ಫ.ಗು.(ಆರ್.ಬಿ.ಪಿ.ಜಿ) ಹಳಕಟ್ಟಿ ಪ್ರೌಢಶಾಲೆಯ 2021-22…