ಗದಗ: ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ.

ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ರೈತ ಲಕ್ಷ್ಮಣ್ ಒಂದು ತಿಂಗಳ ಹಿಂದೆ ಮೆಕ್ಕೆ ಜೋಳ ಮುರಿದು ಕೂಡಿಹಾಕಿದ್ದ. ಆದರೆ ಇದೀಗ ಬೆಳೆದ ಬೆಳೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸಿನಿಮಾ ಮಂದಿರದಲ್ಲಿ ಪ್ರೇಕ್ಷಕರ ಕಡಿತವಿಲ್ಲ

ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಡಿಕೆಶಿ ಹೇಳಿಕೆ ಹಾಸ್ಯಾಸ್ಪದವಾಗಿವೆ : ರಾಮದಾಸ್ ಟೀಕೆ

ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ರೈತರು ಬೆಳೆ ಸಮೀಕ್ಷೆ: ಮೊಬೈಲ್ ಆಪ್ ಬಳಸುವ ವಿಧಾನ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಅಗಸ್ಟ 11 ರಿಂದ ಗದಗ ಜಿಲ್ಲೆಯಾದ್ಯಂತ…

ಸೂರಣಗಿಯ ಬಾಲಕರಿಬ್ಬರು ತುಂಗಭದ್ರಾ ನದಿಯಲ್ಲಿ ಮುಳಗಿ ಸಾವು

ಶಿರಹಟ್ಟಿ : ಸಂಕ್ರಾಂತಿ ಹಬ್ಬ ದಂದು ಸೂರಣಗಿ ಗ್ರಾಮದ ಬಾಲಕರ ಪಾಲಿಗೆ ಕರಾಳ ಅಷ್ಟೇ ಅಲ್ಲದೇ…