ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

cm bsy karnataka

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಬೆಂಗಳೂರು: ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳನ್ನು ತೆರೆಯದಿರುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಡಿಸೆಂಬರ್ 31ರವರೆಗೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮುಂದಿನ ತೀರ್ಮಾನ, ಡಿಸೆಂಬರ್ ಅಂತ್ಯದಲ್ಲಿ ಸಭೆಯನ್ನು ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಹೈದ್ರಾಬಾದ್ ನಲ್ಲಿರುವ ಆರೋಗ್ಯ ಸಚಿವ ಡಾ.ಸುಧಾಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾಗಿ ಡಿಸೆಂಬರ್ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಇದು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಆಗುತ್ತಿದೆ. ಈ ಕಾರಣದಿಂದ ಈಗಾಗಲೇ ಚಳಿಗಾಲ ರಂಭವಾಗಿದ್ದು, ತಜ್ಞರು ಕೂಡ ಡಿಸೆಂಬರ್ ವರೆಗೆ ಶಾಲೆ ಬೇಡ ಅಂದಿದ್ದಾರೆ. ಡಿಸೆಂಬರ್ ಕೊನೆಯವರೆಗೂ ಶಾಲಾ ಕಾಲೇಜು ಆರಂಭ ಮಾಡುವುದು ಸೂಕ್ತವಲ್ಲ ಎಂದು ಸುಧಾಕರ್ ತಿಳಿಸಿದರು.

ಆರಮಭದಲ್ಲಿ ಶಾಲೆ ಪ್ರಾರಂಭ ಕುರಿತು ಸಾರ್ವಜನಿಕ ಶಿಕ್ಷಣ ಆಯುಕ್ತ ಅನ್ಬುಕುಮಾರ್ ಸಿದ್ಧಪಡಿಸಿದ ವರದಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಎಂ ಅವರಿಗೆ ಸಲ್ಲಿಸಿದರು. ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಿಎಸ್ ವಿಜಯ್ ಭಾಸ್ಕರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

Exit mobile version