ಬೆಂಗಳೂರು : ವಿಶ್ವವಿದ್ಯಾಲಯಗಳಲ್ಲಿ 2019-20 ನೇ ಸಾಲಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಆದೇಶ ಹೊರಡಿಸಿದ್ದು,
ರಾಜ್ಯದಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಕೋವಿಡ್-19 ಹಿನ್ನೆಲೆ ಅತಿಥಿ ಉಪನ್ಯಾಸಕರು ತೀರಾ ಸಂಕಷ್ಟ ಅನುಭವಿಸುವಂತಾಗಿತ್ತು. ಜೀವನ ನಡೆಸುವುದೇ ಕಷ್ಟವಾಗಿ ಪರದಾಡಿದ್ದರು. ಇದೀಗ ರಾಜ್ಯ ಸರ್ಕಾರ ಮತ್ತೊಂದು ವರ್ಷಕ್ಕೆ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಸ್ತರಿಸುವ ಮೂಲಕ ಈ ಆದೇಶ ಹೊರಡಿಸಿದ್ದು ಅತಿಥಿ ಉಪನ್ಯಾಸಕರಿಗೆ ಸಂತಸವನ್ನುಂಟ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ ನೀಡಿದಂತಾಗಿದೆ.