ನವದೆಹಲಿ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಇಂದು ನಿಧನ ಹೊಂದಿದರು.

ಅಹ್ಮದ್ ಪಟೇಲ್ ಅವರಿಗೆ ಕೊರೋನಾ ದೃಢಪಟ್ಟಿದ್ದು, ಗುರುಗ್ರಾಮದ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

3 ಬಾರಿ ಲೋಕಸಭೆಗೆ, 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಕೂಡ ಆಗಿದ್ದರು.

71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದ ಅಹ್ಮದ್ ಪಟೇಲ್ ಅವರು, ಸೋನಿಯಾ ಗಾಂಧಿ ಕುಟುಂಬದ ಆಪ್ತರಾಗಿದ್ದರು.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ಭಾರತೀಯ ಟೆಕ್ಕಿಗಳಿಗೆ ಪೌರತ್ವ: ಮಹತ್ವದ ಆದೇಶಗಳಿಗೆ ಬೈಡನ್ ಸಹಿ

ವಾಷಿಂಗ್ಟನ್: ಅಮೆರಿrಕಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ 15 ಮಹತ್ವದ ಆದೇಶಗಳಿಗೆ ಬೈಡೆನ್ ಸಹಿ ಮಾಡಿದ್ದಾರೆ.…

ರೈಲು ಹಳಿ ದುರಂತ: 16 ಸಾವು

ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…

ಬ್ರೆಜಿಲ್‍,ಆಫ್ರಿಕಾ ವೈರಸ್ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ; ರಾಹುಲ್‍ ಕಿಡಿ

ದೇಶದಲ್ಲಿ ಮತ್ತೆ ಏರಿಕೆಯತ್ತ ಸಾಗಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಕೇಂದ್ರ ಸರ್ಕಾರ ನಿಷ್ಕಾಳಜಿ ತೋರಿಸುತ್ತಿದೆ ಎಂದು ಕಾಂಗ್ರೆಸ್‍ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.