ಗದಗ: ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ಈ ಕುರಿತು ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಕುರುಬ ಸಮಾಜವನ್ನು ಎಸ್.ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಕಾಗಿನೆಲೆ ಕನಕ ಗುರುಪೀಠದ ಪೂಜ್ಯರ ನೇತೃತ್ವದಲ್ಲಿ ಸಮಾಜದ ಮುಖಂಡರು ಪಕ್ಷಾತೀತವಾಗಿ ಸಂಘಟಿತರಾಗಿ ಪ್ರಯತ್ನಿಸುತ್ತಿದ್ದಾರೆ. ಕೇಂದ್ರ ಮಟ್ಟದಲ್ಲಿ ನಿಯೋಗವು ಸಂಬಂಧಿಸಿದ ಸಚಿವರಿಗೆ ಮನವಿ ಕೂಡ ಸಲ್ಲಿಸಿದೆ. ಇದಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ ನ.27 ರಂದು ರಾಜ್ಯದ ಮುಖ್ಯಮಂತ್ರಿಗಳಿಗೆ ಭೇಟಿಯಾಗಿ ಮನವಿ ಸಲ್ಲಿಸಲಿದೆ. ಎರಡನೇ ಹಂತದಲ್ಲಿ ನವ್ಹಂಬರ್ 29 ರಂದು ಬಾಗಲಕೋಟೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಈ ಭಾಗದ 5 ಜಿಲ್ಲೆಗಳ ಪೈಕಿ 2 ಲಕ್ಷ ಜನ ಸೇರುವ ಅಂದಾಜಿದೆ. ಗದಗ ಜಿಲ್ಲೆಯಿಂದಲೂ ಕೂಡ ಅಂದಾಜು 50 ಸಾವಿರ ಜನ ಭಾಗವಹಿಸಲಿದ್ದಾರೆ.

ಇನ್ನು ಜನವರಿ 14 ರಿಂದ ಕಾಗಿನೆಲೆ ಪೂಜ್ಯರ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರು ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡು ಫೆ.7 ರಂದು ಬೆಂಗಳೂರು ತಲುಪಿ, ಬೆಂಗಳೂರಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗುವುದು. ಈ ಸಮಾವೇಶದಲ್ಲಿ 10 ಲಕ್ಷ ನಾಡಿನ ಕುರುಬ ಸಮಾಜ ಬಾಂಧವರು ಸೇರುವ ಅಂದಾಜಿದೆ. ಕೂಡಲೇ ಈ ಬಗ್ಗೆ ಸರ್ಕಾರ ಆಸಕ್ತಿ ತೋರಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಬಹುದಿನಗಳಿಂದ ಸರ್ಕಾರಕ್ಕೆ ಈ ಬಗ್ಗೆ ಮನವಿ ಸಲ್ಲಿಸಲಾಗುತ್ತಿದೆ. ಆದರೆ ಸರ್ಕಾರಗಳು ಮನವಿಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿವೆ. ಈ ದೆಸೆಯಲ್ಲಿ ನಮ್ಮ ಹಕ್ಕುಗಳಿಗಾಗಿ ಸಮಾಜದ ಜಗದ್ಗುರುಗಳು ಹಾಗೂ ಪರಮಪೂಜ್ಯರು, ಜನಪ್ರತಿನಿಧಿಗಳು, ಮುಖಂಡರು, ಸಮಸ್ತ ಸಮಾಜ ಬಾಮಧವರು ಒಕ್ಕೋರಲಿನಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕುರುಬ ಸಮಾಜಕ್ಕಾಗುತ್ತಿರುವ ಅನ್ಯಾಯ ಸರಿಪಡಿಸಿ ಎಸ್.ಟಿ ಮೀಸಲಾತಿಯನ್ನು ವಿಸ್ತರಿಸಬೇಕೆಂದು ಒತ್ತಾಯಿಸಿದರು.

ಮೀಸಲಾತಿಯಿಂದ ಶೈಕ್ಷಣಿಕವಾಗಿ ಪ್ರಾತಮಿಕ ಶಿಕ್ಷಣದಿಂದ ನ್ನತ ಶಿಕ್ಷಣದವರೆಗೂ ಸೌಲಭ್ಯಗಳು ದೊರೆಯುತ್ತವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಉದ್ಯೋಗ ಮೀಸಲಾತಿ ಹಾಗೂ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಸೌಲಬ್ಯಗಳು ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ಸಹ ಹೆಚ್ಚಿನ ಅವಕಾಶಗಳು ಸಿಗುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಹೊಸಳ್ಳಿ, ನಾಗರಾಜ ಮೆಣಸಗಿ, ಚನ್ನಮ್ಮ ಹುಳಕಣ್ಣವರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ನಮ್ಮ ಸಮಬಲ ಇದ್ದರೆ ಮಾತ್ರ ಯುದ್ಧ ಸಾರುತ್ತೇವೆ…ರಾಜರಾಜೇಶ್ವರಿ ನಗರದಲ್ಲಿ ಹಾಗಿಲ್ಲ!!

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಪಕ್ಷಗಳ ನಾಯಕರ ಪರ –…

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರವಾಸ ಕಾರ್ಯಕ್ರಮ

ಉತ್ತರಪ್ರಭ ಸುದ್ದಿಗದಗ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು   ಫೆಬ್ರುವರಿ 12 ರಂದು…

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮಾ.31ರ ವರೆಗೆ ವಿಸ್ತರಣೆ

ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

24ರಂದು ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ…