ಬೆಂಗಳೂರು: 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ. ಸ್ಪೀಡ್ ಪೋಸ್ಟ್ ಮೂಲಕ ದೇಶಾದ್ಯಂತ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಿದೆ.

ಆರವಣ, ತುಪ್ಪ, ಅರಿಶಿನ – ಕುಂಕುಮ, ವಿಭೂತಿ ಮತ್ತು ಅರ್ಚನೆಯ ಪ್ರಸಾದವನ್ನು ಒಳಗೊಂಡ ಕಿಟ್ ಗೆ 450 ರೂಪಾಯಿ ನಿಗದಿಪಡಿಸಲಾಗಿದೆ. ಭಕ್ತರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿ 450 ರೂಪಾಯಿ ಪಾವತಿಸಿ ಅಯ್ಯಪ್ಪ ಸ್ವಾಮಿ ಪ್ರಸಾದ ಬುಕ್ ಮಾಡಿದಲ್ಲಿ ಮನೆ ಬಾಗಿಲಿಗೆ ಪ್ರಸಾದ ತಲುಪಿಸಲಾಗುವುದು ಎಂದು ಹೇಳಲಾಗಿದೆ.

ಈ ಮೂಲಕ ಕೊರೊನಾದ ಈ ಸಮಯದಲ್ಲಿ ಈ ಬಾರಿ ಅಯ್ಯಪ್ಪಸ್ವಾಮಿ ಪ್ರಸಾದ ಸಿಗುತ್ತಿಲ್ಲವಲ್ಲಾ ಎನ್ನುವ ಕೊರಗು ದೂರವಾದಂತಾಗಿದೆ.

Leave a Reply

Your email address will not be published. Required fields are marked *

You May Also Like

ಚರ್ಚ್, ಮಸೀದಿಗಳಲ್ಲಿ ದೀಪ ಬೆಳಗಿಸಿ; ದಿಪಾವಳಿ ಆಚರಿಸಿ- ರಾಜು ಖಾನಪ್ಪನವರ

ಶಾಂತಿ, ಕೋಮು ಸೌಹಾರ್ಧತೆಗೆ ಜಿಲ್ಲೆ ಹೆಸರುವಾಸಿಯಾಗಿದೆ. ಇಂತಹ ಸೌಹಾರ್ಧ ತಾಣದಲ್ಲಿ ದೀಪಾವಳಿ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸೋಣ. ಹೀಗಾಗಿ ಚರ್ಚ್, ದರ್ಗಾ ಮಸೀದಿಗಳಲ್ಲಿ ದೀಪ ಬೆಳಗಿಸುವ ಮೂಲಕ ನಾಡಿನಲ್ಲಿ ಕೋಮು ಸೌಹಾರ್ದತೆ ಬಲಪಡಿಸಲು ಮುಂದಾಗೋಣ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.

ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…!

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…