ಬೆಂಗಳೂರು: ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ಈ ವರ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯ ಪುಸ್ತಕ ನೀಡಿ, ಮುಂದಿನ ವರ್ಷ ಸೈಕಲ್ ನೀಡಲು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಮವಸ್ತ್ರಕ್ಕಾಗಿ ಟೆಂಡರ್ ಕರೆದು, ರಾಜ್ಯ ಸರ್ಕಾರ ಸ್ವಾಮ್ಯದ ಕಂಪನಿ ಕರ್ನಾಟಕ ಜವಳಿ ಅಭಿವೃದ್ಧಿ ನಿಗಮ ಮತ್ತು ಇತರೆ ಖಾಸಗಿ ಸಂಸ್ಥೆಗಳಿಗೆ ಆದೇಶವನ್ನು ನೀಡಿದೆ. ಆದರೆ ಸೈಕಲ್ ಟೆಂಡರ್ ಪ್ರಕ್ರಿಯೆ ಆರಂಭಿಸಿಲ್ಲ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಅಲ್ಪಸಂಖ್ಯಾತ ನಿಗಮದ ಅಧಿಕಾರಿ ಎಸಿಬಿ ಬಲೆಗೆ

ಗದಗ: ನಗರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕಂಪ್ಯೂಟರ್ ಆಪರೇಟರ್ ಇಂದು ಎಸಿಬಿ…

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ:ಶಾಸಕ ಬಂಡಿ

ಮನಸೊರೆಗೊಂಡ ಮಲ್ಲಕಂಬ ಪ್ರದರ್ಶನ ಉತ್ತರಪ್ರಭ ನರೆಗಲ್ಲ: ನೆಲದ ಮೇಲೆ ಮಾಡುವ ಯೋಗಾಸನವನ್ನು ಕಂಬದ ಮೇಲೆ ಚಾಕಚಕ್ಯತೆಯಿಂದ…

ಮುಳಗುಂದ: ಮಳೆಯಿಂದ ಬೆಳೆ ಜಲಾವೃತ

ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.